ಜೆಡಿಎಸ್‌ ತೊರೆದು ‘ಕೈ’ ಹಿಡಿದ ಆಯನೂರು ಮಂಜುನಾಥ್

Date:

  • ಅಭಿಮಾನಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
  • ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ನಿಮಗೆ ಸೂಕ್ತ ಸ್ಥಾನಮಾನ : ಡಿ.ಕೆ. ಶಿವಕುಮಾರ್ ಭರವಸೆ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ಮಾಜಿ ವಿಧಾನ ಪರಿಷತ್‌ ಸದಸ್ಯ, ಆಯನೂರು ಮಂಜುನಾಥ್ ಈಗ ಮತ್ತೆ ಪಕ್ಷ ಬದಲಾಯಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ‘ಕೈ’ ಹಿಡಿದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಆಯನೂರು ಮಂಜುನಾಥ್ ಜೊತೆಗೆ ನಾಗರಾಜ್ ಗೌಡ ಹಾಗೂ ಅವರ ಅಭಿಮಾನಿ ಬಳಗ ಕಾಂಗ್ರೆಸ್‌ ಸೇರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಾತನಾಡಿದ ಆಯನೂರು ಮಂಜುನಾಥ್, ಯಾವುದೇ ಷರತ್ತು ಇಲ್ಲದೆಯೇ ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಪಂಚಾಯತಿ ಜಿಪಂ ತಾಪಂ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕುತ್ತೇನೆ ಎಂದು ಹೇಳಿದರು.

ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ನಿಮಗೆ ಸೂಕ್ತ ಸ್ಥಾನಮಾನಗಳು ಸಿಗಲಿವೆ. ನೀವು ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡರೆ ನಿಮಗೆ ಸಿಗಬೇಕಾದ ಅವಕಾಶಗಳು ತಪ್ಪುತ್ತವೆ, ಅಷ್ಟೇ ಅಲ್ಲ ಜನ ನಿಮ್ಮ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದರು.

ರಾಷ್ಟ್ರ ಧ್ವಜದ ಗುರುತು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಚಂದ್ರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...