ಅಯೋಧ್ಯೆ ಗ್ಯಾಂಗ್‌ರೇಪ್ | ಆರೋಪಿಗಳು, ಬೇಜವಾಬ್ದಾರಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಅಖಿಲೇಶ್ ಆಗ್ರಹ

Date:

ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸಿರುವ ಪೊಲೀಸರ ವಿರುದ್ಧವೂ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.

20 ವರ್ಷದ ಸಂತ್ರಸ್ತ ಯುವತಿ, ಆಗಸ್ಟ್ 16 ಮತ್ತು 25 ರ ನಡುವೆ ಮೂರು ವಿಭಿನ್ನ ಸಂದರ್ಭಗಳಲ್ಲಿ ತನ್ನ ಮೇಲೆ ಒಂಬತ್ತು ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ಧೋರಣೆಯಿಂದ ನಡೆದುಕೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಹಿಂದೇಟು ಹಾಕಿದ್ದಾರೆ ಎಂದು ಯುವತಿ ವಿವರಿಸಿರುವ ವಿಡಿಯೋ ತುಣುಕನ್ನು ಅಖಿಲೇಶ್ ಯಾದವ್ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಯೋಧ್ಯೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತ ಯುವತಿಯ ವಿಡಿಯೋ ಹೇಳಿಕೆಯು ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಮೂಲ ಕಾರಣವನ್ನು ಬಹಿರಂಗಪಡಿಸಿದೆ. ಪೊಲೀಸರಿಗೆ ದೂರು ನೀಡಲು ಸಂತ್ರಸ್ತೆ ಹೇಗೆಲ್ಲ ಹೆಣಗಾಡಿದ್ದಾಳೆ. ದೂರು ಸಲ್ಲಿಸಲು ಕಷ್ಟವಾಗಿರುವ ಕಾರಣದಿಂದಾಗಿ, ಅನೇಕ ಅಪರಾಧಗಳು ವರದಿಯಾಗುತ್ತಿಲ್ಲ. ಇದು ಅಪರಾಧಿಗಳ ಆತ್ಮಸ್ಥೈರ್ಯವನ್ನು ಹೆಚ್ಚುತ್ತದೆ. ಕೃತ್ಯಕ್ಕೆ ಪ್ರಚೋದಿಸುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...