ರಾಮಮಂದಿರ ಗರ್ಭಗುಡಿಗೆ ರಾಷ್ಟ್ರಪತಿಗಿಲ್ಲ ಅವಕಾಶ: ಬುಡಕಟ್ಟು ಸಮುದಾಯದ ಹಿನ್ನೆಲೆ ಸಮಸ್ಯೆಯೇ? ನೆಟ್ಟಿಗರ ಪ್ರಶ್ನೆ

Date:

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ.

ಈ ಕುರಿತಂತೆ ಹೊಸ ಸುದ್ದಿಯೊಂದು ಹೊರಬಿದ್ದಿದ್ದು, ಉದ್ಘಾಟನೆ ದಿನದಂದು ಗರ್ಭಗುಡಿಯೊಳಗೆ ಕೇವಲ ಐದು ಮಂದಿಗೆ ಮಾತ್ರ ಪ್ರವೇಶ ಇರಲಿದೆ ಎಂದು ವರದಿಯಾಗಿದೆ.

ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಐವರು ಭಾಗವಹಿಸಲಿದ್ದಾರೆ. ಆ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ್ ಲಲ್ಲಾನ ವಿಗ್ರಹದ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯುವ ಸಮಯದಲ್ಲಿ ಗರ್ಭಗುಡಿಯಲ್ಲಿ ಮೋದಿ ಜೊತೆ ನಾಲ್ಕು ಮಂದಿ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ವರದಿಗಳು ಬಿತ್ತರವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಜೊತೆಗೆ ಉತ್ತರ ಪ್ರದೇಶದ ಗವರ್ನರ್ ಆನಂದಿ ಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಮಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ಅವರು ಮಾತ್ರ ಉಪಸ್ಥಿತರಿರುತ್ತಾರೆ ಎಂದು ವರದಿಯಾಗಿದೆ. ಅಲ್ಲದೇ, ಈ ಸಂದರ್ಭದಲ್ಲಿ ಗರ್ಭಗುಡಿಯನ್ನು ಪರದೆಯಿಂದ ಮುಚ್ಚಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಪರ್ಯಾಸ ಏನೆಂದರೆ, ದೇಶದ ಮೊದಲ ಪೌರ ಎಂಬ ಗೌರವ ಹೊಂದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪಟ್ಟಿಯಿಂದ ಬಿಟ್ಟಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಇದು ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೂ ಕೂಡ ಕಾರಣವಾಗಿದೆ.

2023ರ ಮೇ 28ರಂದು ಉದ್ಘಾಟನೆಗೊಂಡಿದ್ದ ಸಂಸತ್ತಿನ ನೂತನ ಕಟ್ಟಡ ‘ಸೆಂಟ್ರಲ್ ವಿಸ್ಟಾ’ದ ಉದ್ಘಾಟನೆಯಿಂದಲೂ ಕೂಡ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಹೊರಗಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದ ವಿಪಕ್ಷಗಳು, ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ರಾಮಮಂದಿರದ ಗರ್ಭಗುಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರವೇಶಕ್ಕೆ ಅವಕಾಶ ಇಲ್ಲದಿರುವುದರಿಂದ ಈಗ ಅದೇ ರೀತಿಯಲ್ಲಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ.

ಈ ಬಗ್ಗೆ ಪ್ರಶ್ನಿಸಿರುವ ನೆಟ್ಟಿಗರು, “ಮತ್ತೆ ಅವರು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಹೊರಗಿಡಲಾಗಿದೆ. ಆಕೆ ಬುಡಕಟ್ಟು ಸಮುದಾಯದಿಂದ ಬಂದವರು ಎಂಬ ಕಾರಣಕ್ಕೆ ಈ ರೀತಿ ನಡೆದುಕೊಳ್ಳಲಾಗುತ್ತಿದೆಯೇ?” ಎಂದು ಪ್ರಶ್ನಿಸತೊಡಗಿದ್ದಾರೆ.

ಈ ನಡುವೆ ಕೆಲವರು, “ಜ.22ರಂದು ಗರ್ಭಗುಡಿಯೊಳಗೆ ಪ್ರವೇಶಿಸುವ ಐವರಲ್ಲಿ ಆರ್‍‌ಎಸ್‌ಎಸ್‌ನ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೂಡ ಇರಲಿದ್ದಾರೆ ಎಂಬ ಸುದ್ದಿ ಓದಿದೆ. ಒಂದು ವೇಳೆ ಅದು ನಿಜವೇ ಆಗಿದ್ದರೆ, ರಾಷ್ಟ್ರಪತಿಗಿಂತಲೂ ದೊಡ್ಡ ಹುದ್ದೆಯಲ್ಲಿ ಅವರಿದ್ದಾರೆಯೇ? ಮಹಿಳೆ ಎಂಬ ಕಾರಣಕ್ಕೋ ಅಥವಾ ಬುಡಕಟ್ಟು ಸಮುದಾಯದಿಂದ ಬಂದರು ಎಂಬ ಕಾರಣಕ್ಕೋ? ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...