ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

Date:

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ತನಿಖೆ ಆಗುವವರೆಗೂ ನಾನು ಸದನಕ್ಕೆ ಹೋಗುವುದಿಲ್ಲ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮದೇ ಪಕ್ಷದ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ. “ಕಳೆದ ಸದನದಲ್ಲಿ ಕಾಮಗಾರಿಗಳ ಬಗ್ಗೆ ನಾನು ಪ್ರಶ್ನೆ ಕೇಳಿದ್ದೆ. ಆದರೆ, ಕೃಷ್ಣ ಬೈರೇಗೌಡರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿ ಮಾತನಾಡಿದ್ದಾರೆ. ನಾನು ಹಣ ಪಡೆದು ಕೆಲಸ ಕೊಟ್ಟಿದ್ದೇನೆ ಎಂದಿದ್ದರು. ಆಗ ನಾನು ಸದನದಲ್ಲಿ ಪ್ರತಿಭಟನೆ ಮಾಡಿದ್ದೆ. ಯಶವಂತರಾಯ ಪಾಟೀಲ್, ಶಿವಲಿಂಗೇಗೌಡ ಬೆಂಬಲ ನೀಡಿದ್ದರು” ಎಂದರು.

“ನಾನು ಸ್ವಾಭಿಮಾನದಿಂದ ಬದುಕುತ್ತಿರುವವನು. ಇವತ್ತು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಅಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ. ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ನಾನೇನಾದರೂ ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಲಿ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...