ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

Date:

“ಬಾಬಾಬುಡನ್‌ಗಿರಿಯಲ್ಲಿನ ಗೋರಿ ಧ್ವಂಸ ಪ್ರಕರಣವನ್ನು ಸರ್ಕಾರವು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿಯು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ” ಎಂದು ಸಿಎಂ ಕಚೇರಿ ಸ್ಪಷ್ಟೀಕರಣ ನೀಡಿದೆ.

ಈ ಬಗ್ಗೆ ತುರ್ತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಕಚೇರಿಯ ಅಧಿಕಾರಿಗಳು, “ಬಾಬಾಬುಡನ್‌ಗಿರಿಯಲ್ಲಿನ ಗೋರಿ ಧ್ವಂಸ ಪ್ರಕರಣದ ಬಗ್ಗೆ ಕೆಲವು ದೃಶ್ಯ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದೆ. 2017ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೇ” ಎಂದು ಸ್ಪಷ್ಟೀಕರಣ ನೀಡಿದ್ದಾರೆ.

“2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು” ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿವಿ9

“2023ರ ಅಕ್ಟೋಬರ್ 24ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು, ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ” ಎಂದು ಸಿಎಂ ಕಚೇರಿಯ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...