ಬಾಬರಿ ಮಸೀದಿ ಧ್ವಂಸ ಸಮರ್ಥನೆ; ಮಹಾ ವಿಕಾಸ್ ಅಘಾಡಿಯಿಂದ ಹೊರನಡೆದ ಎಸ್‌ಪಿ

Date:

ಮಹಾರಾಷ್ಟ್ರದಲ್ಲಿ ತನ್ನ ಮಿತ್ರಪಕ್ಷವಾದ ಶಿವಸೇನೆಯ (ಉದ್ಧವ್ ಠಾಕ್ರೆ ಬಣ) ಬಾಬರಿ ಮಸೀದಿ ಧ್ವಂಸ ಸಮರ್ಥನೆ ಮಾಡುವಂತಹ ಜಾಹೀರಾತು ಪ್ರಕಟಿಸಿರುವುದಕ್ಕೆ ಸಮಾಜವಾದಿ ಪಕ್ಷ (ಎಸ್‌ಪಿ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಮಾಜವಾದಿ ಪಕ್ಷವು ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದಿಂದ ಹೊರನಡೆದಿದೆ.

ಶಿವಸೇನೆ ಕೋಮುವಾದ ಮಾಡುತ್ತದೆ ಎಂದು ಎಸ್‌ಪಿ ಆರೋಪಿಸಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಕೂತು ಚರ್ಚಿಸುವ ಮತ್ತು ಸಮಸ್ಯೆ ನಿವಾರಣೆಗೆ ಯೋಜನೆ ರೂಪಿಸುವ ಎಂದು ತಿಳಿಸಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಮಾಜವಾದಿ ಪಕ್ಷದ ಕೇಂದ್ರ ನಾಯಕತ್ವವು ಇಂಡಿಯಾ ಒಕ್ಕೂಟದೊಂದಿಗೆ ಉಳಿಯಲಿದೆ ಎಂದು ತಿಳಿಸಿದ್ದಾರೆ. ಇಂಡಿಯಾ ಒಕ್ಕೂಟದ ಕಾರ್ಯವೈಖರಿ ಬಗ್ಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಬರಿ ಮಸೀದಿ ಧ್ವಂಸ ತರುವಾಯ ತೀವ್ರಗೊಂಡ ಮುಸ್ಲಿಮರ ಮೇಲಿನ ದಾಳಿ

ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಎಂಎಲ್‌ಸಿ ಮಿಲಿಂದ್ ನಾರ್ವೇಕರ್ ಬಾಬರಿ ಮಸೀದಿ ಧ್ವಂಸವನ್ನು ಶ್ಲಾಘಿಸಿದ್ದು, ಇದರ ಹಿಂದಿರುವವರನ್ನು ಅಭಿನಂದಿಸುವ ಜಾಹೀರಾತನ್ನು ಪೋಸ್ಟ್ ಮಾಡಿದ್ದಾರೆ. ಶಿವಸೇನೆ (ಯುಬಿಟಿ) ಕಾರ್ಯದರ್ಶಿ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಅವರ ಚಿತ್ರಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಇದು ಎಂವಿಎಯಲ್ಲಿ ಚರ್ಚೆಗೆ ಕಾರಣವಾಗಿದೆ.

“ಬಾಬರಿ ಮಸೀದಿ ಕೆಡವಿದವರನ್ನು ಅಭಿನಂದಿಸಿ ಶಿವಸೇನೆ (ಯುಬಿಟಿ) ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿದೆ. ಅವರ (ಉದ್ಧವ್ ಠಾಕ್ರೆ) ಸಹಾಯಕ ಕೂಡ ಎಕ್ಸ್‌ನಲ್ಲಿ ಮಸೀದಿ ಧ್ವಂಸವನ್ನು ಶ್ಲಾಘಿಸಿ ಪೋಸ್ಟ್ ಮಾಡಿದ್ದಾರೆ. ನಾವು ಎಂವಿಎಯನ್ನು ತೊರೆಯುತ್ತಿದ್ದೇವೆ. ನಾನು ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡುತ್ತಿದ್ದೇನೆ” ಎಂದು ಎಸ್‌ಪಿ ಮಹಾರಾಷ್ಟ್ರ ಮುಖ್ಯಸ್ಥ ಅಬು ಅಜ್ಮಿ ಪಿಟಿಐಗೆ ತಿಳಿಸಿದರು.

ಹಾಗೆಯೇ ಉದ್ಧವ್ ಠಾಕ್ರೆ ನೇತೃತ್ವದ ಬಣದೊಂದಿಗಿನ ಮೈತ್ರಿಯನ್ನು ಮರುಪರಿಶೀಲಿಸುವಂತೆ ಅಜ್ಮಿ ಕಾಂಗ್ರೆಸ್‌ಗೆ ಒತ್ತಾಯಿಸಿದರು. “ಎಂವಿಎಯಲ್ಲಿ ಯಾರಾದರೂ ಈ ರೀತಿಯ ನಿಲುವು ಹೊಂದಿರುವುದಾದರೆ ಬಿಜೆಪಿ ಮತ್ತು ಅವರ (ಶಿವಸೇನೆ) ನಡುವಿನ ವ್ಯತ್ಯಾಸವೇನು? ನಾವೇಕೆ ಅವರ ಜೊತೆ ಇರಬೇಕು? ಈ ರೀತಿ ಮಾತನಾಡುವವರ ಜತೆ ಮೈತ್ರಿ ಮಾಡಿಕೊಳ್ಳಬಹುದೇ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಬೇಕಿದೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...