ಜಾಮೀನು ರದ್ದಾಗುತ್ತಿದ್ದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಾಪತ್ತೆ; ಬಂಧನಕ್ಕೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ ಪೊಲೀಸರು

Date:

  • ಜಾಮೀನು ರದ್ದು ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ನಾಪತ್ತೆ
  • ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆ

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿರುವ ಬೆನ್ನಲ್ಲೆ ನಾಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿಕೊಂಡು ಆರೋಪಿಯನ್ನು ಬಂಧಿಸಲು ಸಿದ್ದತೆ ನಡೆಸಿದ್ದಾರೆ ಎನ್ನುವ ಮಾಹಿತಿ ಈ ದಿನ.ಕಾಂಗೆ ಲಭ್ಯವಾಗಿದೆ.

ಲೋಕಾಯುಕ್ತ ಪೊಲೀಸರ ತಂಡವು ಪ್ರತ್ಯೇಕವಾಗಿ ದಾವಣಗೆರೆ, ಚನ್ನಗಿರಿ ಹಾಗೂ ಬೆಂಗಳೂರಿನ ನಿವಾಸದತ್ತ ತೆರಳಿದ್ದು, ಯಾವುದೇ ಕ್ಷಣದಲ್ಲಾದರೂ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರನ್ನು ಬಂಧಿಸುವ ಸಾಧ್ಯತೆ ಇದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಸಂಸ್ಥೆಗೆ ಕೆಮಿಕಲ್‌ ಆಯಿಲ್‌ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡುವುದಕ್ಕೆ ಪ್ರತಿಯಾಗಿ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪಕ್ಕೆ ಸಿಲುಕಿ ಎ1 ಆರೋಪಿಯಾಗಿದ್ದ ಮಾಡಾಳು ಲೋಕಾಯುಕ್ತ ಪೊಲೀಸರು ಬಂಧಿಸುವಷ್ಟರಲ್ಲಿ ತಲೆಮರೆಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ, ಚನ್ನಗಿರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ವಿಜಯೋತ್ಸವ ಆಚರಿಸಿಕೊಂಡಿದ್ದರು. ಇದು ಸಾರ್ವಜನಿಕರಿಂದ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಬಿಜೆಪಿಗೆ ಮುಜುಗರ ತಂದಿತ್ತು.

ಬೆಳಿಗ್ಗೆ ಕ್ಷೇತ್ರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಶಾಸಕರು ಜಾಮೀನು ರದ್ದಾದ ಸುದ್ದಿ ಬರುತ್ತಿದ್ದಂತೆ ಅಜ್ಞಾತ ಜಾಗಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...