ಬಾಗಲಕೋಟೆ ಲೋಕಸಭಾ ಕ್ಷೇತ್ರ | ವೀಣಾ ಕಾಶಪ್ಪನವರ ಪಾಲಾಗುತ್ತಾ ಕೈ ಟಿಕೆಟ್?

Date:

ಬಾಗಲಕೋಟೆ ‌ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಹೆಸರು ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ. ಯಾರಿಗೆ ಟಿಕೆಟ್ ಕೊಡಬೇಕು ಎಂಬ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ.

ಕಾಂಗ್ರೆಸ್ ಪಕ್ಷದಿಂದ ವೀಣಾ ಕಾಶಪ್ಪನವರ, ಮಾಜಿ ಸಂಸದ ವಿಜಯಕುಮಾರ್ ಸರನಾಯಕ, ಆನಂದ ನ್ಯಾಮಗೌಡ, ರಕ್ಷಿತಾ ಈಟಿ ಇನ್ನೂ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದು, ಈ ನಡುವೆ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬರುತ್ತಿದ್ದು, ಯಾರಿಗೆ ಟಿಕೆಟ್‌ ಎಂಬ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಕಳೆದ ಬಾರಿ ಸ್ಪರ್ಧಿಸಿದ್ದ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಮಾಜಿ ಸಂಸದ ಅಜಯಕುಮಾರ ಸರನಾಯಕ, ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈಟಿ ಟಿಕೆಟಿಗಾಗಿ ತಮ್ಮ ನಾಯಕರ ಮೂಲಕ ಲಾಭಿ ನಡೆಸಿದ್ದರು. ಈ ಮೂವರಲ್ಲಿ ಒಬ್ಬರು ಅಭ್ಯರ್ಥಿ ಆಗಬಹುದೆಂಬ ಲೆಕ್ಕಾಚಾರ ಕಾಂಗ್ರೆಸ್‌ ವಲಯದಲ್ಲಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರೂ, ಕ್ಷೇತ್ರದಲ್ಲಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಜನರ ಕಷ್ಟ ಸುಖಕ್ಕೆ ಸ್ಪಂದಿಸಿದ್ದೇನೆ. ಹಾಗಾಗಿ ನನಗೆ ಟಿಕೆಟ್ ಕೊಡಬೇಕು. ಹೈಕಮಾಂಡ್ ಮೇಲೆ ವಿಶ್ವಾಸವಿದೆ ಎಂದು  ಬಾಗಲಕೋಟೆ ಲೋಕಸಭಾ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ವಿಶ್ವಾಸದಲ್ಲಿದ್ದಾರೆ.

ಇನ್ನು ವೀಣಾ ಕಾಶಪ್ಪನವರಿಗೆ ಟಿಕೆಟ್ ಕೊಡಬೇಕೆಂದು ಕ್ಷೇತ್ರದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ವೀಣಾ ಕಾಶಪ್ಪನವರೇ ಸೂಕ್ತ ಅಭ್ಯರ್ಥಿ. ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರೆಲ್ಲರೂ ಸೇರಿ ಗೆಲ್ಲಿಸಿಕೊಂಡು ಬರುತ್ತವೆ ಎಂದು ಹೇಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ನಾಯಕರು ಆನಂದ ನ್ಯಾಮಗೌಡ ಅವರನ್ನು ಸೂಚಿಸಿದ್ದರಿಂದ, ಅವರತ್ತ ಒಲವು ತೋರಿದ್ದರು. ಆದರೆ, ಆನಂದ ಮಾಜಿ ಶಾಸಕ ನ್ಯಾಮಗೌಡ ಸ್ಪರ್ಧಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿಯೇ ಇದ್ದಾರೆ ಎಂಬ ಆಪ್ತ ಮೂಲಗಳು ಹೇಳುತ್ತಿವೆ.

ಇನ್ನು ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬಂದಿದೆ. ಇವರು ಪಕ್ಕದ ವಿಜಯಪುರ ಜಿಲ್ಲೆಯವರು. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ನಾನು ಕೂಡ ಸ್ಪರ್ಧಿಸುವೆ ಎಂದು ಹೇಳುತ್ತಿದ್ದಾರೆ.

ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು. ಕಳೆದ ಬಾರಿ ಸೋತಿರುವ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕೆಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಘಟಕದ ಅಧ್ಯಕ್ಷ ಮಂಜುನಾಥ ಪರುತಗೇರಿ ಆಗ್ರಹಿಸಿದ್ದಾರೆ.

ಬೇರೆ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟು, ಜಿಲ್ಲೆಗೆ ಅವಮಾನ ಹಾಗೂ ಅನ್ಯಾಯ ಮಾಡಬೇಡಿ ಎಂದು ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆ ದಿನಂಕ ಘೋಷಣೆ ಆಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲೆಯವರಿಗೆ ಸಿಗುತ್ತದೆಯೋ ಇಲ್ಲ ಬೇರೆ ಜಿಲ್ಲೆಯವರಿಗೆ ಟಿಕೆಟ್ ಸಿಗುತ್ತದೆಯೋ ಕಾದು ನೋಡಬೇಕಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...