ಬಗರ್ ಹುಕುಂ ಅರ್ಜಿ ವಿಲೇಗೆ ಆಸಕ್ತಿ ತೋರದಿದ್ದರೆ ಕಾನೂನು ಕ್ರಮ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

Date:

• ಬಗರ್ ಹುಕುಂ ಅರ್ಜಿ ವಿಲೇಗೆ ತಹಶೀಲ್ದಾರರಿಗೆ ಎರಡು ತಿಂಗಳ ಗಡುವು..!
• ಅರ್ಹ ರೈತರಿಗೆ ಮುಂದಿನ ವಾರದಲ್ಲಿ ಭೂ ಮಂಜೂರಾತಿಗೆ ಸೂಚನೆ

ಬಗರ್ ಹುಕುಂ ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟಿಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ “ಬಗರ್ ಹುಕುಂ” ಅರ್ಜಿ ಆಹ್ವಾನಿಸಲಾಯಿತು. ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ. ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು, ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

ಅರ್ಹರ ಗ್ರ್ಯಾಂಟ್ ಗೆ ವಿಳಂಬ ಬೇಡ

“ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ, ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.

‘ವಿಎ’ ಗಳನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳಿಸಬೇಡಿ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳುಹಿಸಬೇಡಿ ಎಂದು ತಹಶೀಲ್ದಾರರಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದರು.

“ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಫೀಲ್ಡ್ ಗೆ ಕಳುಹಿಸಬೇಡಿ” ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...