ಕೊಲೆ ಪ್ರಕರಣ | ಹೃದ್ರೋಗವಿದೆ ಎಂದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಇಲ್ಲ ಜಾಮೀನು; ಟೆಸ್ಟ್‌ ಮಾಡಿಸಿಕೊಂಡು ಬರುವಂತೆ ಕೋರ್ಟ್‌ ಸೂಚನೆ

Date:

ರೌಡಿಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಶಕ ಬೈರತಿ ಬಸವರಾಜ್‌ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಅವರನ್ನು ಇಂದೇ ಜಯದೇವ ಆಸ್ಪತ್ರೆಯಲ್ಲಿ ಹೃದಯ ಪರೀಕ್ಷೆಗೆ ಒಳಪಡಿಸಬೇಕು. ಶನಿವಾರ, ಪರೀಕ್ಷಾ ವರದಿ ಮತ್ತು ಆರೋಪಿ ಬಸವರಾಜ್‌ ಅವರನ್ನು ಹಾಜರುಪಡಿಸಬೇಕೆಂದು ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ.

ಗುರುವಾರ ರಾತ್ರಿ ಬೈರತಿ ಬಸವರಾಜ್ ಅವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದರು. ಈ ವೇಳೆ, ಬೈರತಿ ಪರ ವಕೀಲರು, ಆರೋಪಿ ಬಸವರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಇದೆ. ಅವರಿಗೆ ಚಿಕಿತ್ಸೆಗೆ ಅಗತ್ಯವಿದ್ದು, ಜಾಮೀನು ನೀಡಬೇಕೆಂದು ವಾದಿಸಿದ್ದರು.

ಅವರ ವಾದವನ್ನು ಗಮನಿಸಿದ ನ್ಯಾಯಾಧೀಶರು, ಜಾಮೀನು ಕೊಡಲು ನಿರಾಕರಿಸಿದ್ದಾರೆ. ಆರೋಪಿ ಬೈರತಿ ಬಸವರಾಜ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಶನಿವಾರ ವರದಿ ಸಲ್ಲಿಸುವಂತೆ ಮತ್ತು ಆರೋಪಿಯನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ಸಲ್ಲಿಕೆಯಾಗುವ ವೈದ್ಯಕೀಯ ಪರೀಕ್ಷಾ ವರದಿಯನ್ನು ಆಧರಿಸಿ ಅವರಿಗೆ ಜಾಮೀನು ನೀಡಬೇಕೇ-ಇಲ್ಲವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆಗಳಿವೆ.

ಏನಿದು ಬಿಕ್ಲು ಶಿವು ಹತ್ಯೆ ಪ್ರಕರಣ?

2025ರ ಜುಲೈ 15ರಂದು ಬೆಂಗಳೂರಿನ ಭಾರತಿನಗರದ ಮನೆಯ ಬಳಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆಸ್ತಿ ವಿವಾದ ಮತ್ತು ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ತನಿಖೆಯ ವೇಳೆ ಸಿಐಡಿ ಪೊಲೀಸರಿಗೆ ಬಿಕ್ಲು ಶಿವನ ಮೊಬೈಲ್‌ನಲ್ಲಿ ಶಾಸಕರು ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ಲಭ್ಯವಾಗಿದೆ. ಅಲ್ಲದೆ, ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕರು ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಸವರಾಜ್ 5ನೇ ಆರೋಪಿ (A5) ಆಗಿದ್ದು, ಕೊಲೆಯ ಸಂಚು ರೂಪಿಸಿದ ಪ್ರಮುಖ ವ್ಯಕ್ತಿ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಶಾಸಕರು ಬಂಧನ ಭೀತಿಯಿಂದ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...