ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

Date:

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾರೆ. ವಿಧಾನಸೌಧ ತಮ್ಮ ಕಚೇರಿಯಲ್ಲಿಯೂ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಇತ್ತೀಚೆಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

ಬಳಿಕ, ಜಾಮೀನು ಕೋರಿ ಮುನಿರತ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಜಾಮೀನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ ಮಾಡಿದ್ದ ಪ್ರಕರಣದಲ್ಲಿಯೂ ಮುನಿರತ್ನ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ಆ ಪ್ರಕರಣದಲ್ಲಿಯೂ ಮುನಿರತ್ನಗೆ ಇತ್ತೀಚೆಗೆ ಜಾಮೀನು ದೊರೆತಿತ್ತು. ಆದರೆ, ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ದೊರೆಯದ ಕಾರಣ ಮುನಿರತ್ನ ಜೈಲಿನಲ್ಲಿಯೇ ಇದ್ದರು. ಇದೀಗ ಆ ಪ್ರಕರಣದಲ್ಲಿಯೂ ಜಾಮೀನು ದೊರೆತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...