ಬೈರತಿ ಸುರೇಶ್ ದರೋಡೆಕೋರ, ಹೆಬ್ಬಾಳದಿಂದ ಓಡಿಸುತ್ತೇವೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಸಚಿವ ಬೈರತಿ ಸುರೇಶ್ ಮತ್ತು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಯಡಿಯೂರಪ್ಪ ಪತ್ನಿ ಸಾವಿನ ವಿಚಾರವಾಗಿ ತಮ್ಮ ಬಗ್ಗೆ ಮಾತನಾಡಿದ್ದ ಬೈರತಿ ಸುರೇಶ್‌ಗೆ ನವದೆಹಲಿಯಲ್ಲಿ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, “ರಾಕೇಶ್‌ ಸಿದ್ದರಾಮಯ್ಯ ಸಾವಿಗೆ ಸಚಿವ ಬೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಆ ಮಾತನ್ನು ಹೇಳಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬೈರತಿ ಸುರೇಶ್ ದರೋಡೆಕೋರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಿದವರು. ಅವರನ್ನು ಹೆಬ್ಬಾಳದಿಂದ ಓಡಿಸುತ್ತೇವೆ. ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಅದನ್ನು ಸುಟ್ಟು ಹಾಕಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದರೋಡೆಕೋರರನ್ನು ಹಿಡಿಯಲು ಹೋದಾಗ ಪೊಲೀಸರಿಗೆ ಗುಂಡು ಹೊಡೆಯುವವರು ಇದ್ದಾರೆ. ಅದೇ ಕೆಲಸವನ್ನು ಬೈರತಿ ಸುರೇಶ್ ಮಾಡಿದ್ದಾರೆ. ಸಿದ್ದರಾಮಯ್ಯನವರೇ ಇಂಥವರನ್ನು ಯಾಕೆ ಹತ್ತಿರ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದರು.

“ರಾಜಕಾರಣಿಗಳು ಮಹಾಭಾರತವನ್ನು ಓದಬೇಕು. ಕೌರವರ ಜೊತೆ ಶಕುನಿ ಯಾಕೆ ಸೇರಿಕೊಂಡಿದ್ದ? ಕೌರವರಿಂದ ದುರ್ಯೋಧನನ್ನು ಉದ್ಧಾರ ಮಾಡಲು ಅವನು ಸೇರಿಕೊಂಡಿರಲಿಲ್ಲ. ಅವರನ್ನು ಮುಗಿಸಲು ಸೇರಿಕೊಂಡಿದ್ದ. ಅಂಥ ಶಕುನಿಗಳು ಇವತ್ತಿಗೂ ರಾಜಕಾರಣದಲ್ಲಿ ದೊಡ್ಡ ಪದವಿಗೆ ಬಂದಾಗ ಮುಖ್ಯಮಂತ್ರಿಯ ಹಿಂದೆ ಮುಂದೆ ಸುತ್ತುತ್ತಿರುತ್ತಾರೆ” ವ್ಯಂಗ್ಯವಾಡಿದರು.

“ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆಯಾಗಲಿ” ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...