ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

Date:

  • 100ಕ್ಕೂ ಹೆಚ್ಚಿನ ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆ
  • ಹಲವು ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿದ ಅಭ್ಯರ್ಥಿ

ಸೇಡಂ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿಗೆ ಅವಕಾಶ ಕೊಟ್ಟು ಆಡಳಿತ ನೋಡಿದ್ದಿರಿ. ಜೆಡಿಎಸ್‌ಗೆ ಒಂದು ಅವಕಾಶ ಕೊಟ್ಟು ನೋಡಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರ ಮಾಡಿತೋರಿಸುತ್ತೇನೆ” ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ.

ಸೇಡಂ ಪಟ್ಟಣದ ಜೆಡಿಎಸ್ ಕಛೇರಿಯಲ್ಲಿ ಗುರುವಾರ ಸಂಜೆ ತಾಲೂಕಿನ ಹನುಮನಹಳ್ಳಿ, ಕೊಡ್ಲಾ ಗ್ರಾಮದ ರವಿ, ಭೀಮಾಶಾಪ್ಪ, ಶಂಕರ ಗುತ್ತೇದಾರ್, ಕೃಷ್ಣಪ್ಪ, ದೇವು, ಪ್ರಕಾಶ್, ಶರಣಯ್ಯ, ಪ್ರವೀಣ್, ಬಂಗಾರಪ್ಪ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಗುತ್ತೇದಾರ ಮಾತನಾಡಿದರು.

“ರೈತರಿಗೆ, ವಿದ್ಯಾರ್ಥಿಗಳಿಗೆ, ಬಡವರಿಗೆ, ಕೂಲಿಕಾರ್ಮಿಕರ ಪರವಾಗಿ ಅನೇಕ ಯೋಜನೆಗಳು ಜಾರಿಗೆ ತರುತ್ತೇನೆ. ಸೇಡಂ ಮತಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಸ್ಥಳೀಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೊಗ ನೀಡಲು ಶ್ರಮೀಸಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!

“ಜೆಡಿಎಸ್‌ ಅಭ್ಯರ್ಥಿಯಾಗಿ ನಾನು ಆಯ್ಕೆಯಾದಾಗಿನಿಂದ ಮತಕ್ಷೇತ್ರದ ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ. ಮಾತ್ರವಲ್ಲದೇ, ಅನೇಕ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ” ಎಂದರು.

ಈ ವೇಳೆ ಸುನೀತಾ ತಳವಾರ, ಶಂಭುಲಿಂಗ ನಾಟೇಕಾರ, ಭೀಮರಾಯ ಹನಮನಳ್ಳಿ, ಓಂಕಾರ್ ಮೋಹನ, ಡಾ. ಸುಶೀಲ್ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...