ಏಪ್ರಿಲ್ 19ರ ಬೆಳಿಗ್ಗೆ 7.00 ಗಂಟೆಯಿಂದ ಜೂನ್ 1ರ ಸಂಜೆ 6.30ರವರೆಗೆ ಲೋಕಸಭಾ ಮತ್ತು ನಾಲ್ಕು ರಾಜ್ಯ ವಿಧಾನಸಭಾ ಚುನಾವಣೆಗಳ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
“ಜನ ಪ್ರಾತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ಸಮಯ ಕೊನೆಗೊಳ್ಳುವ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಭಿಪ್ರಾಯ ಸಮೀಕ್ಷೆ ಅಥವಾ ಇತರ ಯಾವುದೇ ಮತದಾನ ಸಮೀಕ್ಷೆಯ ಫಲಿತಾಂಶಗಳು ಸೇರಿದಂತೆ ಯಾವುದೇ ಚುನಾವಣಾ ವಿಷಯವನ್ನು ಯಾವುದೇ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ” ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.
ಈ ಸುದ್ದಿ ಓದಿದ್ದೀರಾ? ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ
ಲೋಕಸಭಾ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಅವಧಿಯಲ್ಲಿ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ನಡೆಯುತ್ತಿದೆ ಎನ್ನಲಾಗಿದೆ.




