ಸ್ಕಾರ್ಫ್‌ಗಳ ಮೇಲಿನ ನಿಷೇಧ ಹಿಜಾಬ್‌ಗೆ ಅನ್ವಯಿಸುವುದಿಲ್ಲ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

Date:

  • ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶಕ್ಕೆ ಆಕ್ರೋಶ’
  • ‘ಪರೀಕ್ಷಾ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಮುಖ್ಯ ಉದ್ದೇಶ’

ಪರೀಕ್ಷಾ ಸಂದರ್ಭದಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲಿನ ನಿಷೇಧವು ಹಿಜಾಬ್‌ಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವರು ಸ್ಪಷ್ಟನೆ ನೀಡಿದ್ದಾರೆ.

“ಪರೀಕ್ಷಾ ಸಮಯದಲ್ಲಿ ನಡೆಯುವ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಹಿಂದಿನ ಮುಖ್ಯ ಉದ್ದೇಶ. ಹಿಜಾಬ್‌ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

“ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳು ಇರಲಿವೆ. ಹಿಜಾಬ್ ಧರಿಸಿರುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ವರದಿಯಾಗಿರುವ ವಂಚನೆ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಹಾಗಾಗಿ ಸಂಪೂರ್ಣ ತಪಾಸಣೆ ಇರಲಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...