ಬೆಂಗಳೂರು | ʼನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳ; ಬಿಜೆಪಿ ಸಂಸದರಿಗೆ ಸವಾಲು ಎಸೆದ ಪ್ರಿಯಾಂಕ್‌ ಖರ್ಗೆ

Date:

ರಾಜ್ಯದ ಬಿಜೆಪಿ ಸಂಸದರಿಗೆ ತಾಕತ್ತಿದ್ದರೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಕಡಿಮೆ ಮಾಡಲಿ. ಬಸ್‌ ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ ಹೋಗಿ ಪ್ರಯಾಣಿಕರ ಬಳಿ ಕ್ಷಮೆ ಕೇಳಿದ್ದರು. ಈಗಲೂ ಬಿಜೆಪಿ ನಾಯಕರು ಮೆಟ್ರೊ ನಿಲ್ದಾಣಕ್ಕೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಕ್ಷಮೆ ಕೇಳಲಿ. ಬೇಕಿದ್ದರೆ ಗುಲಾಬಿ ಹೂ ನಾವೇ ಖರೀದಿಸಿ ಕೊಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದರು.

ಬೆಂಗಳೂರು ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮೆಟ್ರೊ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ಮೆಟ್ರೊ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದಾಗ ಇದೇ ಬಿಜೆಪಿ ಸಂಸದರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದರು. ಆದರೆ, ಈಗ ದರ ಏರಿಕೆ ಮಾಡಿದಾಗ ನಾವು(ರಾಜ್ಯ ಸರ್ಕಾರ) ಜವಾಬ್ದಾರಿಯೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ‘ನಮ್ಮ ಮೆಟ್ರೋ’ದಿಂದ ಹಗಲು ದರೋಡೆ, ಪ್ರಯಾಣಿಕರಿಗೆ ಆರ್‌ ಅಶೋಕ್‌ ಗುಲಾಬಿ ಹೂ ಕೊಡುವುದು ಯಾವಾಗ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ಮೆಟ್ರೊ ದರ ಕಡಿಮೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುವುದು. ಹೆಚ್ಚಳ ಮಾಡಿದಾಗ ಸುಮ್ಮನೆ ಕೂರುವುದಲ್ಲ. ಈಗಲೂ ಕೇಂದ್ರ ಸರ್ಕಾರವನ್ನು ಹೋಗಿ ಕೇಳಲಿ ನೋಡೋಣ” ಎಂದು ಸವಾಲು ಹಾಕಿದರು.

ʼನಮ್ಮ ಮೆಟ್ರೊ’ ಪ್ರಯಾಣ ದರವನ್ನು ಬಿಎಂಆರ್‌ಸಿಎಲ್‌ ಶೇ.47ರಷ್ಟು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...