ಬೆಂಗಳೂರು | ರೈತರ ಖಾತೆಗೆ ₹628 ಕೋಟಿ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

Date:

ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ₹2,000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ₹628 ಕೋಟಿಯನ್ನು ನೇರವಾಗಿ 33 ಲಕ್ಷ ಮಂದಿ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭಾನುವಾರದಂದು ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

“1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಬರಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಸಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಸಿಕೊಳ್ಳಬೇಕು” ಎಂದು ಸಚಿವರು ರೈತರಲ್ಲಿ ಕೋರಿದರು.

“ರಾಜ್ಯ ಸರ್ಕಾರವು ರಾಜ್ಯದ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗಳ ಖಾತೆಗಳಿಗೆ ₹870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು, ಶಾಸಕರ ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಈವರೆಗೆ 431 ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ 236 ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳು ನಡೆದಿದೆ” ಎಂದು ಹೇಳಿದರು.

“ರಾಜ್ಯದ 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಅಲ್ಲದೇ 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿನ 46 ವಾರ್ಡ್‌ಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.

“ಕಳೆದ ಐದು ವರ್ಷದ ಅಂಕಿ-ಅಂಶಗಳ ಆಧಾರದ ಮೇಲೆ, ಮುಂಜಾಗ್ರತಾ ಕ್ರಮವಾಗಿ, ಮುಂಬರುವ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1193 ವಾರ್ಡ್‌ಗಳನ್ನು ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ.

ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗೆ ಹೊಸ ಕೊಳವೆ ಬಾವಿಗಳ ಕೊರೆಯುವ ಅವಶ್ಯಕತೆ ಇದ್ದಲ್ಲಿ, ಕೊಳವೆ ಬಾವಿಗಳನ್ನು ಕೊರೆಯಲು ಕ್ರಮವಹಿಸುವಂತೆ ಮುಖ್ಯಮಂತ್ರಿಯವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

“ಮೇವಿನ ಸಮಸ್ಯೆ ನೀಗಿಸಲು 2023ರ ನವೆಂಬರ್ ತಿಂಗಳಲ್ಲಿ ಮೊದಲ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್‌ಗಳನ್ನು ರೈತರಿಗೆ ನೀಡಲಾಗಿದ್ದು, ಎರಡನೇ ಹಂತವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯದ ವಿವಿಧೆಡೆ 3 ಗೋಶಾಲೆಗಳನ್ನು‌ ಸ್ಥಾಪಿಸಲಾಗಿದ್ದು, ಇದರ ಜೊತೆಗೆ ಮೇವಿನ ದಾಸ್ತಾನಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರ ಪರವಾಗಿ ಧ್ವನಿ ಎತ್ತಿ; ಶಾಸಕರಿಗೆ ಸಂಗಮೇಶ ಸಗರ ಆಗ್ರಹ

“ಬರಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ₹18,178 ಕೋಟಿ ಬರಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಯವರೂ ಕೂಡ ಪ್ರಧಾನಮಂತ್ರಿಯವರನ್ನು ಖುದ್ದು ಭೇಟಿಯಾಗಿ ಬರಪರಿಹಾರದ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವರನ್ನು ಮುಖ್ಯಮಂತ್ರಿಯವರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು ಖುದ್ದು ಭೇಟಿ ಮಾಡಿ, ಬರಪರಿಹಾರ ನೀಡಲು ಮನವಿ ಮಾಡಿದ್ದಾರೆ. ಈಗಾಗಲೇ ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಗೃಹ ಸಚಿವರು ರಾಜ್ಯ ಪ್ರವಾಸದಲ್ಲಿರುವ, ಈಗಿನ ಸಂದರ್ಭದಲ್ಲಿ, ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...