ಬೆಂಗಳೂರು | ಅನಧಿಕೃತ ಬ್ಯಾನರ್ ಅಳವಡಿಕೆ; ಕಾಂಗ್ರೆಸ್‌ಗೆ 50,000 ರೂ. ದಂಡ

Date:

ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ (ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಳವಡಿಸಿದ್ದ ಅನಧಿಕೃತ ಬ್ಯಾನರ್‌ಅನ್ನು ಬಿಬಿಎಂಪಿ ತೆರವುಗೊಳಿಸಿದ್ದು, 50,000 ರೂ. ದಂಡ ವಿಧಿಸಿದೆ.

ವಸಂತನಗರ ವಾರ್ಡ್-93 ವ್ಯಾಪ್ತಿಯ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಸ್ವತ್ತಿನ ಸಂಖ್ಯೆ:12/1 ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ವಿಭಾಗವು ಬ್ಯಾನರ್‌ ಅಳವಿಡಿಸಿತ್ತು. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ‌. ದೇವರಾಜ ಅರಸು ರವರ ಜನ್ಮ ದಿನಾಚರಣೆ (ಆಗಸ್ಟ್‌ 20) ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಬ್ಯಾನರ್‌ ಹಾಕಲಾಗಿತ್ತು. ಆದರೆ, ಬ್ಯಾನರ್‌ ಅಳವಡಿಕೆಗೆ ಬಿಬಿಎಂಪಿಯ ಅನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ.

ಅನಧಿಕೃತವಾಗಿ ಹಾಕಲಾಗಿದ್ದ ಬ್ಯಾನರ್‌ಅನ್ನು ತೆರವುಗೊಳಿಸಲಾಗಿದ್ದು, ಕಾಂಗ್ರೆಸ್‌ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಿಗೆ 50,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು ಬಿಬಿಎಂಪಿ ಆಯುಕ್ತರ ಖಾತೆಗೆ ಪಾವತಿ ಮಾಡುವಂತೆ ಸೂಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...