ದಕ್ಷಿಣ ಕನ್ನಡ | ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶದ ಬ್ಯಾನರ್‌ಗಳನ್ನು ಹರಿದ ಕಿಡಿಗೇಡಿಗಳು

Date:

ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಏಪ್ರಿಲ್ 20) ನಡೆಯಲಿರುವ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಎಂಬ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿದ್ದಂತೆ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದಿದ್ದಾರೆ.

ಶನಿವಾರ ರಾತ್ರಿ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರುಗಳ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿಯಲಾಗಿದೆ.

ಇದನ್ನು ಓದಿದ್ದೀರಾ? ಮೈಸೂರು | ವಾಜಮಂಗಲದಲ್ಲಿ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸರ್ಕಾರದ ನಡೆ ಕಾರ್ಯಕರ್ತರ ಕಡೆ2

ಈ ಘಟನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಖಂಡಿಸಿದ್ದಾರೆ. “ಕಾಂಗ್ರೆಸ್‌ನ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ವಿಕೃತ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ಅಥವಾ ನಮ್ಮ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಡೆ ಕಾರ್ಯಕರ್ತರ ಕಡೆ1

ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವರಾದ ಚೆಲುವರಾಯ ಸ್ವಾಮಿ, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್‌, ಕಾಂಗ್ರೆಸ್‌ ಧ್ವಜಗಳು ಸೇರಿದಂತೆ ಬಂಟಿಂಕ್ಸ್‌ಗಳನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಹತ್ತಾರು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...