ಬಸವಣ್ಣ ಸಾಂಸ್ಕೃತಿಕ ನಾಯಕ | ಕೇವಲ ಘೋಷಣೆಯಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ, ಬದ್ದತೆ: ಸಿಎಂ

Date:

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅದನ್ನು ಇಂದು ಸಚಿವ ಸಂಪುಟದ ಬಳಿಕ ಸರ್ಕಾರ ಘೋಷಿಸಿದೆ.

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ತಿಳಿಸಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

“ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನ ವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

“ಭಾರತದ ಇತಿಹಾಸದಲ್ಲಿ 12ನೇ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ, ಮತಾಂಧತೆ, ಶೋಷಣೆ, ಮೌಢ್ಯಗಳಿಂದ ಮುಳುಗಿಹೋಗಿದ್ದ ಸಮಾಜವನ್ನು ಮೇಲೆತ್ತಲು ಅರಸ ಬಿಜ್ಜಳನಿಗೆ ಹಣಕಾಸು ಸಚಿವರಾಗಿದ್ದ ಬಸವಣ್ಣನವರು, ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶವೆಂದು ನಾನು ನಂಬಿದ್ದೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಕಾಯಕ ಮತ್ತು ದಾಸೋಹ ನನ್ನ ಇಷ್ಟದ ಬಸವಣ್ಣನನವರ ತತ್ವದ ಮೂಲಧಾತುಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಸಂಪತ್ತಿನ ಉತ್ಪಾದನೆಯ ಶಕ್ತಿ ಎಲ್ಲರದ್ದಾಗಬೇಕು, ಅದರ ವಿತರಣೆ ಸಮಾನವಾಗಿ ನಡೆಯಬೇಕು ಎಂದು ಬಸವಣ್ಣನವರ ಆಶಯವಾಗಿತ್ತು. ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಇಷ್ಟೊಂದು ಸರಳವಾಗಿ ವಿಶ್ಲೇಷಿಸುವುದು ಸಾಧ್ಯ ಇಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

“ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರು ಘಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು” ಎಂದು ಸಿಎಂ ನುಡಿದಿದ್ದಾರೆ.

“ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿ ಯೋಜನೆಯಲ್ಲಿಯೂ ಕಾಣಬಹುದು. ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ, ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ”ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ಸಿದ್ದರಾಮಯ್ಯ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯ ನಿಯಮ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ

“ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರ ವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ” ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...