ದೇವೇಗೌಡರ ಮೇಲೆ ಕಾಂಗ್ರೆಸ್‌ ಗೂಂಡಾಗಿರಿ; ಜನರು ಪಾಠ ಕಲಿಸುತ್ತಾರೆ: ಆರ್‌.ಅಶೋಕ್‌

Date:

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೆ ಕಾಂಗ್ರೆಸ್‌ ಗೂಂಡಾಗಳು ಅವಾಚ್ಯ ಪದಗಳಿಂದ ನಿಂದಿಸಿ ಅಪಮಾನ ಮಾಡಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿಯೇ ಆ ಪಕ್ಷ ಧೂಳಿಪಟ ಆಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಕಿಡಿಕಾರಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಪರವಾಗಿ, ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

“ಅವಾಚ್ಯ ಪದಗಳಿಂದ ದೇವೇಗೌಡರನ್ನು ನಿಂದಿಸಿದವರಿಗೆ ಜನರು ಸರಿಯಾದ ಪಾಠ ಕಲಿಸಲಿದ್ದಾರೆ. ಒಕ್ಕಲಿಗ ಸಮುದಾಯದ ನಾಯಕರಾಗಿ, ಮುಖ್ಯಮಂತ್ರಿಯಾಗಿ ದೇವೇಗೌಡರು ಕೆಲಸ ಮಾಡಿದ್ದಾರೆ. ಅಂತಹವರನ್ನು ಕಾಂಗ್ರೆಸ್‌ ಅವಮಾನ ಮಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಎಲ್ಲದಕ್ಕೂ ತೆರಿಗೆ ವಿಧಿಸುತ್ತಿದೆ. ಇಂತಹ ಕಾಂಗ್ರೆಸ್ಸನ್ನು ತಡೆಯಲು ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು” ಎಂದು ಹೇಳಿದರು.

“ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಬರಗಾಲಕ್ಕೆ ಪರಿಹಾರವಿಲ್ಲ. ಬಿಜೆಪಿ ಸರ್ಕಾರ ವಿದ್ದಾಗ ಮಳೆ ಬರುತ್ತಿದ್ದರೆ, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಮಳೆ ಸ್ಥಗಿತಗೊಂಡಿದೆ. ವಿದ್ಯುತ್‌ ಯಾವಾಗ ಬರುತ್ತದೆ ಎಂದು ತಿಳಿಯುವುದಿಲ್ಲ. ಕಾಂಗ್ರೆಸ್‌ ಸರ್ಕಾರದವರು ಎಲ್ಲದರ ಮೇಲೂ ತೆರಿಗೆ ವಿಧಿಸಿದ್ದಾರೆ. ಮಹಿಳೆಯರಿಗೆ ಕೊಡುವ 2,000 ರೂ. ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಮನೆಯ ದುಡ್ಡಲ್ಲ. ಗಂಡನಿಂದ ಹಣ ಕಿತ್ತು ಅದನ್ನು ಹೆಂಡತಿಗೆ ನೀಡುತ್ತಿದ್ದಾರೆ” ಎಂದು ಟೀಕಿಸಿದರು.

“ಇಡೀ ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಜಾಸ್ತಿಯಾಗಿದೆ. ಹಿಂದೂಗಳನ್ನು ಕಡೆಗಣಿಸಲಾಗುತ್ತಿದೆ. ನೀಚ ಬುದ್ಧಿಯ ಕಾಂಗ್ರೆಸ್‌ಗೆ ಜನರು ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ. ಕಾಂಗ್ರೆಸ್‌ಗೆ ನಾಯಕರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕಂಗನಾ ರನೌತ್‌, ಹೇಮಮಾಲಿನಿ ಬಗ್ಗೆ ಕೀಳಾಗಿ ಮಾತಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯನವರು ಸಾರ್ವಜನಿಕ ಸಭೆಯಲ್ಲೇ ಮಹಿಳೆಯ ಸೀರೆ ಎಳೆದಿದ್ದರು. ಎಚ್‌ ಡಿ ಕುಮಾರಸ್ವಾಮಿ ಒಳ್ಳೆಯ ದೃಷ್ಟಿಯಿಂದ ಮಾತನಾಡಿದ್ದಾರೆ” ಎಂದು ಸಮರ್ಥಿಸಿಕೊಂಡರು.

“ಕಳೆದ ಬಾರಿ ಕಾಂಗ್ರೆಸ್‌ ನಾಯಕರು ಎಚ್‌.ಡಿ.ದೇವೇಗೌಡರ ಮನೆಯ ಬಳಿ ಹುಚ್ಚು ನಾಯಿಯಂತೆ ಹೋಗಿದ್ದರು. ಎರಡು ಬಾರಿ ಅವರ ಜೊತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. ಅಂತಹ ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಬಗ್ಗೆ ಟೀಕೆ ಮಾಡುತ್ತಿರುವುದಕ್ಕೆ ನಾಚಿಕೆ ಪಟ್ಟುಕೊಳ್ಳಬೇಕು” ಎಂದರು.

“ಲೋಕಸಭೆ ಚುನಾವಣೆಯ ಸರ್ವೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ ಎಂಬ ಫಲಿತಾಂಶ ಬಂದಿದೆ. ಆದರೆ ನಾವೇನೂ ಸರ್ಕಾರವನ್ನು ಮುಳುಗಿಸಲು ಹೋಗುವುದಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಸಿಎಂ ಸ್ಥಾನಕ್ಕಾಗಿ ಕಚ್ಚಾಡುತ್ತಿದ್ದು, ಅವರೇ ಸರ್ಕಾರವನ್ನು ಮುಳುಗಿಸಲಿದ್ದಾರೆ. ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...