ಭಾಷಣಗಳಲ್ಲಿ ‘ಪನೌತಿ, ಕಿಸೆಗಳ್ಳ’ ಎಂದು ಬಳಸಬೇಡಿ: ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

Date:

ತಮ್ಮ ಸಾರ್ವಜನಿಕ ಭಾಷಣಗಳ ವೇಳೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಪನೌತಿ(ಕೆಟ್ಟ ಶಕುನ), ಕಿಸೆಗಳ್ಳ ಎಂಬಿತ್ಯಾದಿಯ ಪದಗಳನ್ನು ಬಳಸಬೇಡಿ, ಎಚ್ಚರಿಕೆಯಿಂದ ಇರಿ ಎಂದು ಎನ್ನುವ ಮೂಲಕ ಪ್ರಧಾನಿಯನ್ನು ಗೇಲಿ ಮಾಡುವಂತಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ.

“ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ “ಪನೌಟಿ” (ಕೆಟ್ಟ ಶಕುನ) ಮತ್ತು “ಪಿಕ್‌ಪಾಕೆಟ್” ಗೇಲಿಗಳ ಹಿನ್ನೆಲೆಯಲ್ಲಿ ತಮ್ಮ ಸಾರ್ವಜನಿಕ ಹೇಳಿಕೆಗಳಲ್ಲಿ ಹೆಚ್ಚು ಜಾಗರೂಕರಾಗಿರಿ” ಎಂದು ಭಾರತೀಯ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂಚಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಡಿಸೆಂಬರ್‌ನಲ್ಲಿ ಸ್ಟಾರ್ ಪ್ರಚಾರಕರು ಮತ್ತು ರಾಜಕೀಯ ಮುಖಂಡರಿಗೆ ದೆಹಲಿ ಹೈಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ಈ ಸೂಚನೆ ನೀಡಿದ್ದು, ಈ ಸಲಹೆಯನ್ನು ಶ್ರದ್ಧೆಯಿಂದ ಅನುಸರಿಸುವಂತೆ ರಾಹುಲ್ ಗಾಂಧಿ ಅವರಲ್ಲಿ ಆಯೋಗವು ಮನವಿ ಮಾಡಿದೆ.

2023ರ ನವೆಂಬರ್ 19ರಂದು ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ವಿಶ್ವಕಪ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದ್ದರಿಂದ ಟೀಮ್ ಇಂಡಿಯಾದ ಚಾಂಪಿಯನ್ ಪಟ್ಟ ಕೈತಪ್ಪಿತ್ತು.

ಆ ಬಳಿಕ ರಾಜಸ್ಥಾನದ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಜಲೋರ್‌ನಲ್ಲಿ ನಡೆಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲಿನ ಬಗ್ಗೆಯೂ ಪ್ರಸ್ತಾಪಿಸುತ್ತಾ, “ನಮ್ಮ ಹುಡುಗರು ವಿಶ್ವಕಪ್ ಗೆದ್ದಿದ್ದರೆ ಚೆನ್ನಾಗಿತ್ತು. ಆದರೆ ಪನೌತಿ (ಅಪಶಕುನ) ಹೋಗಿ ನಮ್ಮನ್ನು ಸೋಲುವಂತೆ ಮಾಡಿದರು ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಆದರೆ ಇದನ್ನು ಯಾವ ಮಾಧ್ಯಮಗಳು ತೋರಿಸುವುದಿಲ್ಲ” ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿದೆ ವ್ಯಂಗ್ಯವಾಡಿದ್ದರು. ಇದು ಬಿಜೆಪಿ ಹಾಗೂ ಸಂಘಪರಿವಾರನ್ನು ಕೆರಳಿಸಿತ್ತು.

ಇದನ್ನು ಓದಿದ್ದೀರಾ? ಯೂತ್‌ ಕಾಂಗ್ರೆಸ್‌ನಿಂದ ‘ಮೋದಿ ಕಾ‌ ಅಸ್ಲಿ ಪರಿವಾರ್’ ಪೋಸ್ಟರ್‌: ದಿಲ್ಲಿ ಪೊಲೀಸರಿಂದ ಎಫ್‌ಐಆರ್‌

ಪ್ರಧಾನಿಯವರನ್ನು ಪರೋಕ್ಷವಾಗಿ ಉಲ್ಲೇಖಿಸಿ ‘ಪನೌತಿ’ ಮತ್ತು ‘ಪಿಕ್ ಪಾಕೆಟ್’ನಂತಹ ಪದಗಳನ್ನು ಬಳಸಿದ್ದರಿಂದ ಚುನಾವಣಾ ಆಯೋಗವು, ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿತ್ತು. ರಾಹುಲ್ ಗಾಂಧಿ ಮಾಡಿದ ಭಾಷಣವು “ಒಳ್ಳೆಯ ಅಭಿರುಚಿಯಲ್ಲಿರಲಿಲ್ಲ” ಎಂದು ಹೇಳುವ ಮೂಲಕ ನೋಟಿಸ್ ಕುರಿತು ನಿರ್ಧರಿಸಲು ದೆಹಲಿ ಹೈಕೋರ್ಟ್ 2023ರ ಡಿಸೆಂಬರ್ 21ರಂದು ಆಯೋಗವನ್ನು ಕೇಳಿತ್ತು. ಈಗ ಈ ನೋಟಿಸ್ ಅನ್ನು ವಿಲೇವಾರಿ ಮಾಡುವ ವೇಳೆ, “ಭವಿಷ್ಯದಲ್ಲಿ ಸಾರ್ವಜನಿಕ ಭಾಷಣಗಳ ವೇಳೆ ಬಳಸುವ ಪದಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ” ಎಂದು ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...