ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ ಕೆ ಸುರೇಶ್

Date:

ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ತಿಳಿಸಿದರು.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, “ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದರು.

ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೇಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಪಟ್ಟಣದಲ್ಲಿ ಜಮೀರ್ ಅವರ ಹೇಳಿಕೆ ಅಡ್ಡಿಯಾಗಬಹುದು ಎಂಬ ಊಹಾಪೋಹ ಇತ್ತು ಎಂದು ಕೇಳಿದಾಗ, “ಆ ಭಾವನೆ ಸ್ಥಳೀಯ ಮಟ್ಟದಲ್ಲಿ ಇರಲಿಲ್ಲ ಎಂದು ನಾನು ಸ್ಪಷ್ಟನೆ ನೀಡಿದ್ದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದೆ. ಇದರಿಂದ ಮಾಧ್ಯಮಗಳಿಗೆ ಬೇಸರವಾಗಿರಬಹುದು. ಜಮೀರ್ ಅವರ ಹೇಳಿಕೆ ಮೊದಲ ಬಾರಿಗೆ ಹೇಳಿದ್ದಲ್ಲ. ಜಮೀರ್ ಅವರು ಯಾರಿಗೆ ಈ ಪದ ಬಳಸಿದ್ದರು ಅವರು ಇದಕ್ಕೆ ಈ ಹಿಂದೆ ಆಕ್ಷೇಪ ಮಾಡಿರಲಿಲ್ಲ” ಎಂದರು.

ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಅವರು ಕೂಡ ವಿಶ್ವಾಸ ವ್ಯಕ್ತಪಡಿಸದ್ದರು. ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...