ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಜೈವಿಕವಲ್ಲದ ಪ್ರಧಾನಿ ಮಣಿಪುರಕ್ಕೆ ಹೋಗಲಿ: ಜೈರಾಮ್ ರಮೇಶ್

Date:

ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿಯಾಗಬಹುದು ಎಂಬ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಹೇಳಿಕೆಯನ್ನು ಉಲ್ಲೇಖಿಸಿ ಮೋದಿ ಅವರನ್ನು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್‌ ರಮೇಶ್ ಅವರು, “ಜೈವಿಕವಲ್ಲದ ಪ್ರಧಾನಿ ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಮಣಿಪುರಕ್ಕೆ ಹೋಗಬೇಕು” ಎಂದು ಹೇಳಿದ್ದಾರೆ. ಹಾಗೆಯೇ 2025ರಲ್ಲಿ ಉಡಾವಣೆಯಾಗಲಿರುವ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ’ಕ್ಕೆ ಪ್ರಧಾನಿ ಮೋದಿ ಅಭ್ಯರ್ಥಿಯಾಗಬಹುದು ಎಂಬ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆಂಬ ಮಾಧ್ಯಮ ವರದಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು (ಪಿಎಂ ಮೋದಿ) ನಿಸ್ಸಂಶಯವಾಗಿ ಅನೇಕ ಇತರ, ಹೆಚ್ಚು ನಿರ್ಣಾಯಕ ಜವಾಬ್ದಾರಿಗಳನ್ನು  ಹೊಂದಿದ್ದಾರೆ. ಮಾನವಸಹಿತ ಬಾಹ್ಯಾಕಾಶ ಮಿಷನ್‌ಗೆ ಗಗನ ನೌಕೆಯನ್ನು ಗಗನಯಾನ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಕೊಡುಗೆ ನೀಡಲು ವಿನ್ಯಾಸಗೊಳಿಸಲಾಗಿದೆ. ದೇಶದ ಮುಖ್ಯಸ್ಥರನ್ನು ವಿಶ್ವಾಸದಿಂದ ಬಾಹ್ಯಾಕಾಶಕ್ಕೆ ಕಳುಹಿಸುವ ಸಾಮರ್ಥ್ಯ ನಮ್ಮಲ್ಲಿದ್ದರೆ ನಮಗೆಲ್ಲರಿಗೂ ತುಂಬಾ ಹೆಮ್ಮೆಯಾಗುತ್ತದೆ” ಎಂದು ಎಸ್ ಸೋಮನಾಥ್ ಹೇಳಿದ್ದರು.

ಇದನ್ನು ಓದಿದ್ದೀರಾ?  ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

ಗಗನಯಾನ ಯೋಜನೆಯು ಮತ್ತೊಂದು ಪ್ರಮುಖ ಭಾರತೀಯ ಮಿಷನ್ ಆಗಿದ್ದು, ಇದು ಮೂರು ಸದಸ್ಯರ ಸಿಬ್ಬಂದಿಯನ್ನು 400 ಕಿಮೀ ಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಯಾಗಿದೆ. ನೀರಿನಲ್ಲಿ ಲ್ಯಾಂಡ್ ಆಗುವ ಮೂಲಕ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗುವ ಯೋಜನೆ ರೂಪಿಸಲಾಗಿದೆ.

ಇನ್ನು 2023ರ ಮೇ ತಿಂಗಳಿನಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈವರೆಗೂ ಕೂಡಾ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡದಿರುವುದು, ಮಾತನಾಡದಿರುವುದನ್ನು ವಿಪಕ್ಷಗಳು ನಿರಂತರವಾಗಿ ಟೀಕಿಸುತ್ತಾ ಬಂದಿದೆ.

ಒಂದು ವರ್ಷಗಳ ಬಳಿಕ ಪ್ರಧಾನಿ ಮೋದಿ ಬುಧವಾರ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕೇಂದ್ರ ಮಣಿಪುರದಲ್ಲಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

“ಮಣಿಪುರದಲ್ಲಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. 11,000ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ನಿರಂತರವಾಗಿ ಕಡಿಮೆಯಾಗುತ್ತಿವೆ” ಎಂದು ಪ್ರಧಾನಿ ಮೋದಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...