ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಒಗ್ಗಟ್ಟಾಗಿ ಚುನಾವಣೆ ಮಾಡಿ, ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ

Date:

“ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದರು.

“ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ.80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ” ಎಂದು ಸಿಎಂ ಕರೆ ನೀಡಿದರು.

ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಬೆಳಗಾವಿಯಲ್ಲಿ ನಾವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ” ಎಂದರು.

ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಶಾಸಕ ಲಕ್ಷ್ಮಣ ಸವದಿ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಸಚಿವರು- ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...