ಬೆಳಗಾವಿ ಲಾಠಿ ಪ್ರಹಾರ | ಶಿಲಾಯುಗ ಕಾಲದ ಮನಃಸ್ಥಿತಿ ಸರ್ಕಾರ ಇದು: ಕುಮಾರಸ್ವಾಮಿ ಆಕ್ರೋಶ

Date:

ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರು ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ” ಎಂದು ಹರಿಹಾಯ್ದಿದ್ದಾರೆ.

“ತಮ್ಮ ಬೇಡಿಕೆಗಳ ಬಗ್ಗೆ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದಿರುವ ಅವರು, ಸಿದ್ದರಾಮಯ್ಯ ಅವರನ್ನು ಸರ್ವಾಧಿಕಾರಿ ಎಂದು ಕರೆದು ಅವರ ಸರ್ಕಾರವನ್ನು ತುಘಲಕ್ ಸರ್ಕಾರ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...