ಬೆಳಗಾವಿ ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, “ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ

“ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ. ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು. ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು. 92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆ ದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...