ಬಳ್ಳಾರಿ ಬಾಣಂತಿ ಸಾವು | ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

Date:

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಬಾಣಂತಿಯ ಸಾವುಗಳ ಹಿನ್ನೆಲೆ ಶನಿವಾರ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರದ ನರಿಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಳ್ಳಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ” ಎಂದಿದ್ದಾರೆ.

“ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...