ಬಳ್ಳಾರಿ ಪಾಲಿಕೆ | ನೂತನ ಮೇಯರ್ ಆಗಿ ಮಾಜಿ ಸಚಿವ ನಾಗೇಂದ್ರ ಆಪ್ತ ನಂದೀಶ್; ಉಪಮೇಯರ್ ಆಗಿ ಡಿ.ಸುಕುಂ

Date:

ಇಂದು ಬಳ್ಳಾರಿ ನಗರ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್‌ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದರೆ, ಉಪ ಮೇಯರ್‌ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಳ್ಳಾರಿ ನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 21 ಹಾಗೂ ಪಕ್ಷೇತರರಾಗಿ ಆರಿಸಿ ಬಂದು ಕಾಂಗ್ರೆಸ್ ಬೆಂಬಲಿಸಿರುವ 5 ಜನ ಸದಸ್ಯರು ಸೇರಿದಂತೆ 26 ಜನರ ಬಲವಿತ್ತು. ಬಿಜೆಪಿಯವರು 13 ಸದಸ್ಯರ ಬಲ ಹೊಂದಿದ್ದರು. ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಹೊಂದಿದ್ದರಿಂದ ಅಧಿಕಾರ ಸೂತ್ರ ಹಿಡಿದಿದೆ.

ಮೇಯ‌ರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಅವರ ಪೈಕಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಮುಲ್ಲಂಗಿ ನಂದೀಶ್, ಮುಂಡೂರು ಪ್ರಭಂಜನ್ ಕುಮಾ‌ರ್, ಹಿರಿಯ ಸದಸ್ಯ ಪಿ.ಗಾದೆಪ್ಪನವರು ತಮಗೆ ಅವಕಾಶ ಕಲ್ಪಿಸುವಂತೆ ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ಬಾರಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಚುನಾವಣೆ ನಿಗದಿ ಮಾಡಿ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಅಂತೆಯೇ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್ ಹಾಗೂ ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನ ಮಾಡಲಾಯಿತು. ಆ ಪ್ರಕಾರ ಮೇಯರ್ ಆಗಿ ಮುಲ್ಲಂಗಿ ನಂದೀಶ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಮೇಯರ್ ಆಗಿ ಆಯ್ಕೆಯಾಗಿರುವ ನಂದೀಶ್ ಪಾಲಿಕೆಯ 18ನೇ ವಾರ್ಡಿನ್ ಕಾಂಗ್ರೆಸ್ ಸದಸ್ಯನಾಗಿದ್ದರೆ, ಉಪಮೇಯರ್ ಸುಕುಂ 26ನೇ ವಾರ್ಡ್ ಸದಸ್ಯೆಯಾಗಿದ್ದಾರೆ.

ಬಿಜೆಪಿಯಿಂದ ಶ್ರೀನಿವಾಸ್‌ ಮೋತ್ಕರ್ ಮೇಯ‌ರ್ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಉಪಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.

ಇದನ್ನು ಓದಿದ್ದೀರಾ? ‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ’ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ಆರಂಭಗೊಂಡ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಯಾರನ್ನೂ ಪಾಲಿಕೆ ಕಚೇರಿಯೊಳಗೆ ಬಿಟ್ಟಿರಲಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...