ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ

Date:

ಪೊಲೀಸರಿಗೆ ಧಮ್ಕಿ ಹಾಕಿದ ಆರೋಪ ಪ್ರಕರಣದಲ್ಲಿ ಬಂಧಿಸಲೆಂದು ಹೋಗಿದ್ದಾಗ ಇಂದು ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾಅವರನ್ನು ಬಂಧನ ಮಾಡದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತಿಳಿಸಿ ತೆರಳಿದ್ದರಿಂದ, ರಾತ್ರಿ ಠಾಣೆಗೆ ಹಾಜರಾಗಿರುವುದಾಗಿ ತಿಳಿದುಬಂದಿದೆ.

ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕೂಡ ಬಿಜೆಪಿ ಕಾರ್ಯಕರ್ತರು, ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ: ಶಾಸಕ ಹರೀಶ್ ಪೂಂಜಾ

ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಹರೀಶ್‌ ಪೂಂಜಾ, “ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್‌ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ” ಎಂದು ತಿಳಿಸಿದರು.

“ಅಂದು ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಬಿದರಿ ಅವರ ಕಾಲರ್‌ ಪಟ್ಟಿ ಹಿಡಿದಿದ್ದರು. ನಾನು ಅಧಿಕಾರಕ್ಕೆ ಪೊಲೀಸರ ವಿರುದ್ಧ ಮಾತನಾಡಿಲ್ಲ. ಕಾರ್ಯಕರ್ತನ ಪರವಾಗಿ ನಾನು ಮಾತನಾಡಿದ್ದೇನೆ. ಅಮಾಯಕನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೇಸ್‌ ಹಾಕಲಾಗಿದೆ. ಕಾಂಗ್ರೆಸ್‌ನ ದ್ವೇಷದ ರಾಜಕಾರಣವನ್ನು ನಾವು ಸಹಿಸುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...