ಬೆಂಗಳೂರು | ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಬಿಜೆಪಿ ಅಧ್ಯಕ್ಷನ ವಿರುದ್ಧ ಆರೋಪ

Date:

ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್‌ ಗೌಡ ಬೇಲೂರು ಎಂದು ಹೇಳಲಾಗಿದೆ.

ಆನೇಕಲ್‌ನ ಎಸ್‌ವಿಎಂ ಶಾಲೆಯ ಬಳಿ ಪ್ರವೀಣ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಸಾವಿಗೂ ಮುನ್ನ ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ತಮ್ಮ ಸಾವಿಗೆ ಆನೇಕಲ್‌ನ ಬಿಜೆಪಿ ಅಧ್ಯಕ್ಷ ಸೇರಿದಂತೆ ಹಲವರು ಕಾರಣವೆಂದು ಹೇಳಿದ್ದಾರೆ. ಅವರುಗಳ ಹೆಸರನ್ನೂ ಉಲ್ಲೇಖಿಸಿದ್ದಾರೆ.

ತಮ್ಮ ಸಾವಿಗೆ ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಕಾರಣವೆಂದು ವಿಡಿಯೋದಲ್ಲಿ ಹೇಳಿದ್ದಾರೆ. ಮುಖ್ಯವಾಗಿ ಕಿರಣ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಸರಿಸಲಾದವರಲ್ಲಿ ಯಾರನ್ನೇ ಬಿಟ್ಟರೂ ಪರವಾಗಿಲ್ಲ. ಆದರೆ, ಕಿರಣ್‌ ಎಂಬಾತನನ್ನು ಬಿಡುಬಾರದು. ಆತನಿಗೆ ಶಿಕ್ಷೆಯಾಗಬೇಕು. ಆತ ಹಲವಾರು ಹೆಣ್ಣು ಮಕ್ಕಳಿಗೆ ಕಿರುಕುಳ ಕೊಟ್ಟಿದ್ದಾನೆ. ಆತ ಮಾಡಿರುವ ಕೃತ್ಯಗಳು ನನ್ನ ಮೇಲೆ ಬಂದಿವೆ ಎಂದು ವಿಡಿಯೋದಲ್ಲಿ ಪ್ರವೀಣ್‌ ಆರೋಪಿಸಿದ್ದಾರೆ.

ಕಿರಣ್ ಮಾಡಿದ್ದ ಕೃತ್ಯಗಳಿಗೆ ನಾನು ತಲೆಕೊಡಬೇಕಾಗಿದೆ. ಅಲ್ಲದೆ, ಹಣದ ವಿಚಾರದಲ್ಲಿ ನನ್ನನ್ನು ಮಾತುಕತೆಗೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ವರದಿ ಓದಿದ್ದೀರಾ?:ರಾಜ್ಯಪಾಲರ ದುರುಪಯೋಗ; ಮೋದಿ ಸರ್ಕಾರದ ಕುತಂತ್ರಕ್ಕೆ ಸುಪ್ರೀಂ ಕಡಿವಾಣ

ಆನೇಕಲ್ ಬಿಜೆಪಿ ಸ್ಥಳೀಯ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪಗಳನ್ನು ಮಾಡಿರುವ ಪ್ರವೀಣ್, “ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜುಗೌಡ ಅವರು ನನ್ನನ್ನು ಮನೆಗೆ ಕರೆದಿದ್ದರು. ಈ ವೇಳೆ, ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಮತ್ತು ಆಕೆಯ ಪತಿ ಶ್ರೀನಿವಾಸ್ ಕೂಡ ಇದ್ದರು. ಅವರು ಇನ್ನೂ ಹಲವರನ್ನು ಕರೆಸಿಕೊಂಡು ಸುಮಾರು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

‘‘ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತುಗಳನ್ನು ಪರಿಶೀಲಿಸಿದರೆ ಸತ್ಯ ಗೊತ್ತಾಗುತ್ತದೆ. ಪೊಲೀಸರು ನನಗೆ ನ್ಯಾಯ ಕೊಡಿಸಬೇಕು’’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...