‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

Date:

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು ಮರಳಿ ಕಾಂಗ್ರೆಸ್ ವಶಕ್ಕೆ ತೆಗೆದುಕೊಳ್ಳುವ ಕಾಲ ಕೂಡಿಬಂದಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದರು.

ಶಿವಾಜಿ ನಗರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಹಿಂದೆ ನಾನು ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ ಕಾರಣ ಬಿಜೆಪಿ ಗೆಲುವು ಪಡೆದುಕೊಂಡಿತ್ತು. ಇದೀಗ ಕಾಂಗ್ರೆಸ್ ಪರವಾದ ಅಲೆ ಎದ್ದಿದ್ದು, ಮರಳಿ ಕಾಂಗ್ರೆಸ್ ವಶಕ್ಕೆ ಪಡೆಯಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಮಾತೆತ್ತಿದರೆ ಹಿಂದೂ- ಮುಸಲ್ಮಾನ ಎನ್ನುತ್ತಾರೆ. ಅವರಿಗೆ ಹಿಂದೂವು ಬೇಕಿಲ್ಲ, ಮುಸಲ್ಮಾನರೂ ಬೇಕಿಲ್ಲ. ಅಧಿಕಾರವಷ್ಟೇ ಬೇಕು. ಅಧಿಕಾರಕ್ಕಾಗಿ ಇಬ್ಬರ ನಡುವೆ ಬೆಂಕಿ ಹಚ್ಚುತ್ತಾರೆ. ಆದರೆ, ನಾವು ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಅಂತೆಯೇ ಬದುಕುತ್ತೇವೆ. ಇಂತಹ ಶಾಂತಿಯ ವಾತಾವರಣ ನಿರ್ಮಾಣವಾಗುವುದು ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಮಾತ್ರ” ಎಂದು ತಿಳಿಸಿದರು.

ಗ್ಯಾರಂಟಿ ಕೈ ಹಿಡಿಯುತ್ತವೆ

“ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಗ್ಯಾರಂಟಿ ಜಾರಿ ಸಾಧ್ಯವಿಲ್ಲ ಎಂದರು. ಈಗ ಎಲ್ಲ ಗ್ಯಾರಂಟಿ ಜಾರಿಯಾಗಿದೆ. ಇದು ಬಡವರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿ ಎಷ್ಟಿದೆ ಎಂಬುದರ ಪ್ರತೀಕ. ಮೋದಿ ಬಡವರು, ಟೀ ಮಾರಿದ್ದರು ಎಂದು ನಂಬಿ ಜನ ವೋಟ್ ಹಾಕಿದರು. ಆದರೆ ಮೋದಿ ಏನ್ ಮಾಡಿದರು? ಬರೀ ಶ್ರೀಮಂತರನ್ನು ಉದ್ಧಾರ ಮಾಡುತ್ತಿದ್ದಾರೆ. ಮನ್ಸೂರ್ ಆಲಿಖಾನ್ ವಿದ್ಯಾವಂತ ನಾಯಕರು, ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಿಮ್ಮದು. ದೇಶದ ಜನ ಬದಲಾವಣೆ ಬಯಸಿದ್ದಾರೆ. ರಾಹುಲ್ ಗಾಂಧಿ ಪ್ರಧಾನಿಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, “ನಮ್ಮ ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಶತಸಿದ್ಧ. ಬಿಜೆಪಿಗೆ ನಾವು ಬುದ್ದಿ ಕಲಿಸದಿದ್ದರೆ ಬಡವರು ಬದುಕಲು ಸಾಧ್ಯವಿಲ್ಲ ಎಂಬ ಭಾವನೆ ಮೂಡಿದೆ. ಬಿಜೆಪಿ ಸರಕಾರ ಅಂಬಾನಿ, ಅದಾನಿ ಗುಲಾಮರಾಗಿ ಕೆಲಸ ಮಾಡುತ್ತಿದೆ” ಎಂದು ಹರಿಹಾಯಯ್ದರು.

ಅಭ್ಯರ್ಥಿ ಮನ್ಸೂರ್ ಆಲಿಖಾನ್ ಮಾತನಾಡಿ, “ನಮ್ಮ ಕಾರ್ಯಕರ್ತರ ಉತ್ಸಾಹ, ರಿಜ್ವಾನ್ ಅವರಂತಹ ಯುವ ನಾಯಕರು ಇದ್ದರೆ ಕಾಂಗ್ರೆಸ್ ಸೋಲಲು ಸಾಧ್ಯವೇ ಇಲ್ಲ. ಜಮೀರ್ ಅಹಮದ್ ಅವರಂತಹ ನಾಯಕರಿದ್ದರೆ ಗೆಲುವು ಸುಲಭ. ಮೋದಿ ಹವಾ ಇದೆ ಎಂದುಕೊಳ್ಳುವ ಪರಿಸ್ಥಿತಿಯನ್ನು ಮಾಧ್ಯಮಗಳು ಬಿಂಬಿಸುತ್ತಿವೆ” ಎಂದರು.

ಸಭೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜಿ. ಶೇಖರ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಗೌತಮ್ ಕುಮಾರ್ ಹಾಗೂ ಅನೇಕ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...