ಟೆಕ್‌ ಸಮ್ಮಿಟ್‌ | ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ: ಸಚಿವ ಎಂ.ಸಿ. ಸುಧಾಕರ್

Date:

ಬೋಧನಾಧಾರಿತ ಕಲಿಕೆಗಿಂತ ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ. ಹಾಗಾಗಿ, ಅದಕ್ಕೆ ಪೂರಕವಾದ ಪಠ್ಯಕ್ರಮವನ್ನು ಸಿದ್ಧಪಡಿಸುವ ಹಾದಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ‘ಬೆಂಗಳೂರು ಟೆಕ್‌ ಸಮ್ಮಿಟ್‌’ನ ಎರಡನೇ ದಿನವಾದ ಗುರುವಾರ ಆಯೋಜಿಸಲಾಗಿದ್ದ ‘ಸ್ಟಾರ್ಟ್‌ ಅಪ್’ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

minister mc s

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೋಧನಾಧಾರಿತ ಕಲಿಕೆಗಿಂತ ಕೌಶಲ್ಯಾಧಾರಿತ ಪಠ್ಯಕ್ರಮ ರಚಿಸುವ ನಿಟ್ಟಿನಲ್ಲಿ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮಂತ್ರಿ ಹಾಗೂ ಕೌಶಲಾಭಿವೃದ್ಧಿ ಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯಗಳನ್ನು ಯುವಜನತೆಗೆ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

‘ಉದ್ಯಮಗಳ ಅಗತ್ಯಗಳಿಗೆ ಪೂರಕವಾಗಿ 6ರಿಂದ 8 ವಾರಗಳ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ಪ್ರಾರಂಭಿಸುವ ಕುರಿತೂ ಚಿಂತನೆ ನಡೆದಿದೆ. ಇದರಿಂದ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ಮಾನವ ಸಂಪನ್ಮೂಲವನ್ನು ಸಿದ್ಧಪಡಿಸಲಾಗುವುದು. ಆ ಮೂಲಕ ಉದ್ಯೋಗ ಪಡೆದವರು ಗೌರವಯುತ ಬದುಕನ್ನು ನಡೆಸಲು ಸಾಧ್ಯವಾಗುವಂತಹ ಪರಿಸರವನ್ನು ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.

ಮಿನಿಸ್ಟರ್ ಎಂ ಸಿ ಸುಧಾಕರ್

‘ಈ ಎಲ್ಲ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸುವ ಮೂಲಕ ಕರ್ನಾಟಕವು ತಂತ್ರಜ್ಞಾನ ಹಾಗೂ ಉತ್ಪಾದನೆಯಲ್ಲಿ ತನ್ನ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲಿದೆ’ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಂ ಸಿ ಸಿ

‘ಬೆಂಗಳೂರು ಟೆಕ್ ಸಮ್ಮಿಟ್‌’ನಲ್ಲಿ ಬಿಡುಗಡೆಯಾಗಲಿರುವ 35 ಸ್ಟಾರ್ಟ್‌ಅಪ್‌ ಉತ್ಪನ್ನಗಳಲ್ಲಿ 13 ಉತ್ಪನ್ನಗಳು ಈ ವೇದಿಕೆಯಲ್ಲಿ ಬಿಡುಗಡೆಗೊಂಡವು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇಲಾಖೆಯ ಕಾರ್ಯದರ್ಶಿ ಡಾ. ಏಕ್‌ರೂಪ್ ಕೌರ್, ಸ್ಟಾರ್ಟ್‌ಅಪ್‌ ವಿಷನ್ ಗ್ರೂಪ್‌ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...