ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ: ಆರ್‌ ಅಶೋಕ್‌ ವಾಗ್ದಾಳಿ

Date:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹರಿಹಾಯ್ದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅದಕ್ಕೆ ಉದಾಹರಣೆ, ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಬಂದಿರುವ ಕೊಲೆ ಬೆದರಿಕೆ. ಎಲ್ಲಿ ಕಾನೂನು ಸುವ್ಯವಸ್ಥೆ ಸರಿ ಇರುತ್ತದೋ, ಅಲ್ಲಿಗೆ ಬಂಡವಾಳ‌ ಹರಿದು ಬರುತ್ತದೆ. ನಮ್ಮ ರಾಜ್ಯದಲ್ಲಿ ಅನೇಕ ಹೂಡಿಕೆ ಬರುತ್ತಿತ್ತು, ಆದರೆ ಈಗ ಹೂಡಿಕೆದಾರರ ಸಂಖ್ಯೆ ಕಡಿಮೆಯಾಗಿದೆ” ಎಂದರು.

“ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಈಗ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ನಂಬರ್ ಒನ್ ಕ್ರೈಮ್ ಸಿಟಿ ಆಗಿದೆ. ಸೈಬರ್ ವಂಚನೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. 438 ಕೋಟಿ ರೂಪಾಯಿ ಸೈಬರ್ ವಂಚನೆ ಆಗಿದೆ. ನಮ್ಮ ಸರ್ಕಾರ ಇದ್ದಾಗ ಬಾಲ ಮುಚ್ಚಿಕೊಂಡಿದ್ದ ಭಯೋತ್ಪಾದಕರು, ಬೀದಿ ಬೀದಿಗಳಲ್ಲಿ ಓಡಾಡುತ್ತಿದ್ದಾರೆ. ಪಿಎಫ್‌ಐ ಸಂಘಟನೆಯವರ ಕೇಸು ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ರಾಜಾರೋಷವಾಗಿ ಓಡಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ಕೋಲಾರದಲ್ಲಿ ರಾಜಾರೋಷವಾಗಿ ತಲ್ವಾರ್ ಹಾಕಿದ್ದಾರೆ. ಹಿಂದೆಲ್ಲ ಜನ್ಮದಿನ ಕಾರ್ಯಕ್ರಮಕ್ಕೆ ಕಟೌಟ್, ಫ್ಲೆಕ್ಸ್ ಹಾಕುತ್ತಿದ್ದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಚಟುವಟಿಕೆಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.

“ಪೊಲೀಸ್ ಇಲಾಖೆಯವರು ಚಿಕ್ಕಮಗಳೂರಿನಲ್ಲಿ ಸ್ಟ್ರೈಕ್ ಮಾಡಿದರೆ ಆ ಮಾಹಿತಿಯೇ ಸರ್ಕಾರಕ್ಕೆ ಗೊತ್ತಿಲ್ಲ. ಸ್ಟ್ರೈಕ್ ಮಾಡಿದವರ ಮೇಲೆ ಸರ್ಕಾರ ಕ್ರಮವನ್ನು ತೆಗೆದುಕೊಂಡಿಲ್ಲ. ಬೆಳಗಾವಿಯಲ್ಲಿ ನಾವು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆವು. ಆದರೆ, ಬೆಳಗಾವಿಯಲ್ಲಿ ಚಳಿ ಜಾಸ್ತಿ ಇತ್ತೇನೋ, ನೀವು ನಮ್ಮ ಕಡೆ ತಿರುಗಿಯೂ ನೋಡಲಿಲ್ಲ” ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...