ಮನುಸ್ಮೃತಿ ಮತ್ತು ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ ಕರೆ

Date:

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ಅಂಗೀಕರಣ ದಿನೋತ್ಸವವನ್ನು ಉದ್ಘಾಟಿಸಿ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

“ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ. ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಬಾಬಾ ಸಾಹೇಬರು ಹೇಳಿದ್ದರು‌. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಕರೆ ನೀಡಿದರು.

”ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಬ್ರಾತೃತ್ವವನ್ನು ಪಾಲಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಕ್ಕಲಿಗರಿಗೆ ಪರ್ಯಾಯ ನಾಯಕತ್ವದ ಅಗತ್ಯವಿದೆಯೇ?

“ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಎಚ್ಚರಿಕೆ ನಮಗೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ RSS ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿದ್ದಾರೆ” ಎಂದು ಎಚ್ಚರಿಸಿದರು.

“ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ. ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ. ಮೋದಿ ಮಂತ್ರಿ ಮಂಡಲದಲ್ಲಿ ಮಂತ್ರಿ ಆಗಿದ್ದ ಅನಂತ ಕುಮಾರ ಹೆಗ್ಡೆ ಅವರು, ‘ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು’ ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡರು. ಆದರೆ ಮೋದಿಯವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸಲಿಲ್ಲ. ಅವರನ್ನು ಮಂತ್ರಿ ಸ್ಥಾನದಿಂದ ಇಳಿಸಲಿಲ್ಲ. ಆದ್ದರಿಂದ ಅನಂತ ಕುಮಾರ ಹೆಗ್ಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ. ಇದನ್ನು ದೇಶದ ಜನತೆ ಸರಿಯಾಗಿ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.

“ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು. ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು‌. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ” ಎಂದರು.

“ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...