ಗೃಹಲಕ್ಷ್ಮಿ | ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಕಲಿ ಅರ್ಜಿ: ಸಚಿವೆ ಸ್ಪಷ್ಟನೆ

Date:

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಯಾವುದೇ ಗೊಂದಲವಿದ್ದರೆ 1902 ನಂಬರ್ ಕರೆ ಮಾಡಿ. ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಸಂಖ್ಯೆಗೆ ಮೊಬೈಲ್ ಮೂಲಕ ಎಸ್‍ಎಂಎಸ್ ಮಾಡಬಹುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂದೇಶ ಕಳುಹಿಸಿದ ಬಳಿಕ ಕೂಡಲೇ ಮನೆಯ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಎಸ್‍ಎಂಎಸ್ ಸಂದೇಶ ಹೋಗುತ್ತದೆ. ಈ ಬಗ್ಗೆ ಗೊಂದಲ ಉಂಟಾದರೆ, 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಗೃಹ ಲಕ್ಷ್ಮಿ’ ಯೋಜನೆ | ನಾಳೆಯಿಂದಲೇ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...