ರಾಜಸ್ಥಾನ | ಭಜನ್ ಲಾಲ್ ಶರ್ಮಾ ನೂತನ ಮುಖ್ಯಮಂತ್ರಿ

Date:

ಬಹಳ ಕುತೂಹಲ ಕೆರಳಿಸಿದ್ದ ರಾಜಸ್ಥಾನ ಸಿಎಂ ಆಯ್ಕೆ ವಿಚಾರದಲ್ಲಿ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿರುವ ಬಿಜೆಪಿ ಹೈಕಮಾಂಡ್, ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.

ರಾಜಸ್ಥಾನದ ಸಂಗನೇರ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದರು. ರಾಜಸ್ಥಾನದಲ್ಲಿ ಪಕ್ಷದ ಹಿರಿಯ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ 25 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದಲ್ಲಿ ಚುನಾವಣಾ ಫಲಿತಾಂಶ ಬಂದ 9 ದಿನಗಳ ನಂತರ ಸಿಎಂ ಹೆಸರನ್ನು ಅಂತಿಮಗೊಳಿಸಲಾಗಿದೆ. ಭಜನ್ ಲಾಲ್ ಶರ್ಮಾ ಭರತ್‌ಪುರ ನಿವಾಸಿಯಾಗಿದ್ದಾರೆ. ಹೊರಗಿನವರು ಎಂಬ ಆರೋಪವಿದ್ದರೂ ಕೂಡ ಬಿಜೆಪಿಯಿಂದ ಸಂಗನೇರದಿಂದ ಸ್ಪರ್ಧಿಸಿ, ಭಾರೀ ಅಂತರದಿಂದ ಗೆದ್ದಿದ್ದರು.

ಶರ್ಮಾ ಅವರು ಕಾಂಗ್ರೆಸ್‌ನ ಪುಷ್ಪೇಂದ್ರ ಭಾರದ್ವಾಜ್ ಅವರನ್ನು 48081 ಮತಗಳಿಂದ ಸೋಲಿಸಿದ್ದರು. ಭಜನ್ ಲಾಲ್ ಶರ್ಮಾ ಅವರು ಎಬಿವಿಪಿ ಹಾಗೂ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದ ರೇಸ್‌ನಲ್ಲಿ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕಿ ವಸುಂಧರಾ ರಾಜೆ ಸೇರಿದಂತೆ ಹಲವು ಘಟಾನುಘಟಿ ನಾಯಕರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತಾದರೂ, ಬಿಜೆಪಿ ಹೈಕಮಾಂಡ್ ಭಜನ್‌ ಲಾಲ್‌ ಶರ್ಮಾ ಅವರಿಗೆ ಮಣೆ ಹಾಕುವ ಮೂಲಕ ಅಚ್ಚರಿಯ ಆಯ್ಕೆ ಮಾಡಿದೆ.

ಮುಖ್ಯಮಂತ್ರಿ ಆಯ್ಕೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಜಸ್ಥಾನದ ಬಿಜೆಪಿ ಕೇಂದ್ರ ವೀಕ್ಷಕ ರಾಜ್‌ನಾಥ್ ಸಿಂಗ್, “ರಾಜಸ್ಥಾನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭಜನ್‌ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ. ದಿಯಾ ಸಿಂಗ್ ಮತ್ತು ಡಾ. ಪ್ರೇಮ್ ಚಂದ್ ಬೈರವ ಅವರು ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದಾರೆ. ವಾಸುದೇವ್ ದೇವ್ನಾನಿ ಸ್ಪೀಕರ್ ಆಗಲಿದ್ದಾರೆ” ಎಂದು  ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...