ಹಲವು ಇವಿಎಂ ಯಂತ್ರಗಳನ್ನು ಬದಲಿಸಲಾಗಿದೆ: ದಾಖಲೆಗಳೊಂದಿಗೆ ಛತ್ತೀಸ್‌ಘಡ ಮಾಜಿ ಸಿಎಂ ಭಘೇಲ್ ಆರೋಪ

Date:

ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಅದಕ್ಕೂ ಮುನ್ನ ಛತ್ತೀಸ್‌ಘಡದಲ್ಲಿ ಚುನಾವಣಾ ಆಯೋಗದ ನಡೆಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಭೂಪೇಶ್ ಭಘೇಲ್, “ಹಲವು ಇವಿಎಂ ಯಂತ್ರಗಳನ್ನು ಬದಲಿಸಲಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ದಾಖಲೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, “ಚುನಾವಣಾ ಆಯೋಗವು ಚುನಾವಣೆಯಲ್ಲಿ ಬಳಸಿದ ಯಂತ್ರಗಳ ಸಂಖ್ಯೆಯನ್ನು ನಮಗೆ ನೀಡಿತ್ತು. ಇದರಲ್ಲಿ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿ ಪ್ಯಾಟ್‌ಗಳೂ ಸೇರಿವೆ. ನನ್ನ ಕ್ಷೇತ್ರ ರಾಜನಂದಗಾಂವ್‌ನಲ್ಲಿ ಮತದಾನದ ಬಳಿಕ ನಮೂನೆ 17ಸಿಯಲ್ಲಿ ನೀಡಿರುವ ಮಾಹಿತಿ ಪ್ರಕಾರ ಹಲವು ಯಂತ್ರಗಳ ಸಂಖ್ಯೆ ಬದಲಾಗಿದೆ. ಸಂಖ್ಯೆಗಳನ್ನು ಬದಲಾಯಿಸಿದ ಬೂತ್‌ಗಳು ಸಾವಿರಾರು ಮತಗಳ ಮೇಲೆ ಪರಿಣಾಮ ಬೀರುತ್ತವೆ. ಇತರ ಹಲವು ಲೋಕಸಭಾ ಕ್ಷೇತ್ರಗಳಿಂದ ಇದೇ ರೀತಿಯ ದೂರುಗಳು ಬಂದಿವೆ. ರಾಜ್ಯ ಚುನಾವಣಾಧಿಕಾರಿಗೆ ದೂರು ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವ ಸಂದರ್ಭಗಳಲ್ಲಿ ಯಂತ್ರಗಳನ್ನು ಬದಲಾಯಿಸಲಾಗಿದೆ ಮತ್ತು ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಿದರೆ ಯಾರು ಜವಾಬ್ದಾರರು ಎಂದು ಆಯೋಗವು ಉತ್ತರಿಸಬೇಕು? ಬದಲಾದ ಸಂಖ್ಯೆಗಳ ಪಟ್ಟಿ ತುಂಬಾ ಉದ್ದವಾಗಿದೆ. ಆದರೆ ನಿಮ್ಮ ಪರಿಶೀಲನೆಗಾಗಿ ಕಿರು ಪಟ್ಟಿಯನ್ನು ಲಗತ್ತಿಸಿದ್ದೇನೆ” ಎಂದು ಭೂಪೇಶ್ ಭಘೇಲ್ ತಿಳಿಸಿದ್ದಾರೆ.

ಭೂಪೇಶ್ ಭಘೇಲ್ ಅವರ ಈ ಗಂಭೀರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು, “ಇವಿಎಂ ಸಂಖ್ಯೆಯಲ್ಲಿ ಹೊಂದಾಣಿಕೆಯಿಲ್ಲ ಎಂದು ರಾಜನಂದಗಾಂವ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡಿರುವ ವಿಷಯವು ಸತ್ಯಕ್ಕೆ ದೂರವಾದುದು. ಚುನಾವಣಾ ಸಮಯದಲ್ಲಿ ಬಳಸಲಾಗುವ ಇವಿಎಂಗಳು ಚುನಾವಣಾಧಿಕಾರಿ ಹಂಚಿಕೊಂಡ ಯಂತ್ರಗಳ ಪಟ್ಟಿಗೆ ಅನುಗುಣವಾಗಿರುತ್ತವೆ. ಮತದಾನ ಪ್ರಾರಂಭವಾಗುವ ಮೊದಲು ಇವಿಎಂಗಳನ್ನು ಮುಚ್ಚಲು ಬಳಸುವ ಪೇಪರ್ ಸೀಲ್‌ಗಳ ಮೇಲೆ ಪೋಲಿಂಗ್ ಏಜೆಂಟರು ಸಹಿ ಹಾಕಿದ್ದಾರೆ. ಸ್ವತಂತ್ರ ವೀಕ್ಷಕರ ಸಮ್ಮುಖದಲ್ಲಿ ಮತದಾನದ ಮರುದಿನದ ಪರಿಶೀಲನೆಯ ಸಮಯದಲ್ಲಿ, ಯಾವುದೇ ಸ್ಪರ್ಧಿಗಳಿಂದ ಅಂತಹ ಯಾವುದೇ ಸಮಸ್ಯೆಯನ್ನು ಬಂದಿಲ್ಲ. ಎಣಿಕೆಯ ಸಮಯದಲ್ಲಿ ನಮೂನೆ 17(ಸಿ) ನಲ್ಲಿ ನಮೂದಿಸಲಾದ ಸಂಖ್ಯೆಯೊಂದಿಗೆ ಪರಿಶೀಲಿಸಬಹುದು” ಎಂದು ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಭೂಪೇಶ್ ಭಘೇಲ್, ಇವಿಎಂಗಳಿಗೆ ಎರಡೆರಡು ಸಂಖ್ಯೆ ಹೇಗಿರಲು ಸಾಧ್ಯ ಎಂದು ಮರುಪ್ರಶ್ನೆ ಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...