ಬೀದರ್‌ | ಬಿಜೆಪಿ ಪಕ್ಷದಿಂದ ಮಾತ್ರ ದಲಿತರ ಉದ್ದಾರ ಸಾಧ್ಯ : ಛಲವಾದಿ ನಾರಾಯಣಸ್ವಾಮಿ

Date:

ಡಾ.ಬಿ.ಆರ್.‌ಅಂಬೇಡ್ಕರ್‌ ಅವರು ಬದುಕ್ಕಿದ್ದಾಗ ಅವರನ್ನು ಅಪಮಾನಿಸಿ, ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್‌ ಪಕ್ಷ ಇಂದು ಅಂಬೇಡ್ಕರವಾದಿಗಳಂತೆ ಮಾತನಾಡುತ್ತಿದೆ. ಆದರೆ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ದಲಿತರ ಉದ್ದಾರವಾಗಲು ಸಾಧ್ಯ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಬೀದರ್‌ನಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಜನಾಕ್ರೋಶ ಮಾತನಾಡಿದ ಅವರು, ʼಈ ಕಾಂಗ್ರೆಸ್‌‌ ಎಷ್ಟು ಪಕ್ಷ ಡೆಂಜರ್‌ ಇದೆಯೋ, ಕಾಂಗ್ರೆಸಿನಲ್ಲಿರುವ ದಲಿತ ಮಂತ್ರಿ, ಶಾಸಕರು ಇನ್ನೂ ಡೆಂಜರ್ ಇದ್ದಾರೆ, ಅವರಿಂದ ದಲಿತರು ಯಾವತ್ತೂ ಉದ್ದಾರ ಆಗಲ್ಲ ಎಂಬುದು ಅರ್ಥೈಸಿಕೊಳ್ಳಬೇಕುʼ ಎಂದರು.

ʼಬೀದರ್‌ ಜಿಲ್ಲೆ ಬುದ್ಧ, ಬಸವ, ಅಂಬೇಡ್ಕರ್‌ ಅವರನ್ನು ಗೌರವಿಸುವ ನಾಡು, ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ಇದ್ದಾರೆ. ಈ ದೇಶದಲ್ಲಿ ದಲಿತರು ಉದ್ದಾರ ಆಗಲಿಲ್ಲ, ಬಹಳ ಬಡವರಾಗಿದ್ದಾರೆ, ಅಸ್ಪ್ರಶ್ಯತೆ ಹೋಗಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಭಾಷಣ ಮಾಡುತ್ತಾರೆ. ಆದರೆ ಈ ಹಿಂದೆ 60-70 ವರ್ಷಗಳ ಕಾಲ ದೇಶ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ಹಾಗೂ 55 ವರ್ಷಗಳಿಂದ ಅಧಿಕಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯಕ್ಕೆ ಏನಾದರೂ ಕೊಡುಗೆ ನೀಡಿದ್ದಾರೆಯೇ, ಅವರಿಂದ ಅಸ್ಪ್ರಶ್ಯತೆ, ದಲಿತರ ಬಡತನ ಹೋಗಲಾಡಿಸಲು ಆಗಲಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಲ್ಲಿಕಾರ್ಜುನ ಖರ್ಗೆ ಅವರೇ ದಲಿತರು ಉದ್ದಾರ ಆಗಬೇಕಾದರೆ ನೀವು ಮತ್ತು ನಿಮ್ಮ ಕುಟುಂಬ ಅನುಭವಿಸುತ್ತಿರುವ ಅಧಿಕಾರಕ್ಕೆ ಮೊದಲು ರಾಜೀನಾಮೆ ಕೊಡಿ, ದಲಿತರು ಉದ್ಧಾರ ಆಗಲಿಲ್ಲ ಅಂತ ಮೊಸಳೆ ಕಣ್ಣೀರು ಹಾಕ್ತೀರಾ. ದಲಿತರ ಉದ್ದಾರ ಆಗದಿರುವುದಕ್ಕೆ ದಲಿತರೇ ಕಾರಣʼ ಎಂದರು.

ʼಮೀಸಲಾತಿ ಪಡೆದು ಅಧಿಕಾರಕ್ಕೆ ಬಂದ ಬಳಿಕ ತಮ್ಮ ಸುತ್ತಲಿನ ಬಡ ಜನರಿಗೆ ಸೌಲಭ್ಯಗಳನ್ನು ಹಂಚುವಂತೆ ಬಾಬಾ ಸಾಹೇಬ್ ಅಂಬೇಡ್ಕರ್‌‌ ಅವರು ಹೇಳಿದ್ದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ಅಧಿಕಾರ ನನ್ನ ಕುಟುಂಬಕ್ಕೆ ಕೊಡಿ ಎಂದು ಕೇಳುತ್ತಾರೆ, ಹೀಗಾದರೆ ದಲಿತರು ಉದ್ದಾರ ಆಗೋದು ಯಾವಾಗʼ ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ʼಈ ದೇಶದಲ್ಲಿ ಪ್ರಧಾನಿ ಮೋದಿಯವರು ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಗೌರವಿಸಿದ್ದಾರೆ. ಡಾ.ಅಂಬೇಡ್ಕರ್‌ ಅವರ ಪಂಚಕ್ಷೇತ್ರಗಳನ್ನು ಅಂತರಾಷ್ಟ್ರೀಯ ಸ್ಮಾರಕಗಳನ್ನಾಗಿ ಮಾಡಲಾಗಿದೆ. ರಾಜ್ಯ 10 ಸ್ಥಳಗಳಲ್ಲಿ ಅಂಬೇಡ್ಕರ್ ಅವರ ಸ್ಮಾರಕಗಳು ಆಗುತ್ತಿವೆ. 14 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದು ಬಿಜೆಪಿ ಕೊಡುಗೆ. ದಲಿತರನ್ನು ಗುರುತಿಸುವ ಕೆಲಸ ಬಿಜೆಪಿ ಮಾಡುತ್ತಿದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...