ಬೀದರ್‌ | ವಕ್ಫ್‌ ವಿರುದ್ಧ ಹೋರಾಟ : ಯತ್ನಾಳ ನೇತ್ರತ್ವದ ತಂಡಕ್ಕೆ ಬಿಜೆಪಿಗರಿಂದಲೇ ವಿರೋಧ!

Date:

ವಕ್ಫ್ ಮಂಡಳಿಯ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ ನೇತ್ರತ್ವದ ತಂಡ ಬೀದರ್‌ ನಗರದಲ್ಲಿ ಸೋಮವಾರ ಗಣೇಶ ಮೈದಾನದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಬಳಿಕ ಬೀದರ್ ತಾಲೂಕಿನ ಧರ್ಮಾಪುರ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಬೆಂಬಲಿಗರು ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.

ಇಂದು ವಕ್ಫ್ ವಿರುದ್ಧ ನಡೆದ ಹೋರಾಟದಲ್ಲಿ ಬಿಜೆಪಿ ಶಾಸಕ ಯತ್ನಾಳ, ಮಾಜಿ ಶಾಸಕ ಕುಮಾರ ಬಂಗಾರಪ್ಪ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಆದರೆ, ಧರ್ಮಾಪುರ ಗ್ರಾಮದಲ್ಲಿ ಸ್ಥಳೀಯ ಶಾಸಕ ಡಾ. ಶೈಲೇಂದ್ರ ಬೆಂಬಲಿಸದೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ಬೆಂಬಲಿಗರು ಮಾತನಾಡಿ, ʼಶಾಸಕ ಯತ್ನಾಳ ನೇತ್ರತ್ವದ ಬಿಜೆಪಿ ನಾಯಕರ ತಂಡ ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವುದಕ್ಕೆ ನಮ್ಮ ಬೆಂಬಲವಿದೆ, ಆದರೆ, ಸ್ಥಳೀಯ ಶಾಸಕ ಸೇರಿದಂತೆ ಮುಖಂಡರು, ಕಾರ್ಯಕರ್ತರಿಗೆ ಮಾಹಿತಿ ನೀಡದೆ ಹೋರಾಟ ಮಾಡಲಾಗುತ್ತಿದೆ ಎಂದು ಯತ್ನಾಳ ವಿರುದ್ಧ ಶಾಸಕ ಬೆಲ್ದಾಳೆ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

ಶಾಸಕ ಯತ್ನಾಳ ನೇತ್ರತ್ವದ ತಂಡ ನಡೆಸಿದ ಹೋರಾಟದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷ ಸೇರಿದಂತೆ ಸ್ಥಳೀಯ ಮುಖಂಡರು ಬೆಂಬಲಿಸದೆ ದೂರು ಉಳಿದಿದ್ದಾರೆ. ಬಿಜೆಪಿಯಲ್ಲಿ ಎರಡು ಬಣಗಳ ನಡುವಿನ ಈ ಆಂತರಿಕ ಕೆಸರೆರಚಾಟ ಇದೀಗ ವಕ್ಫ್ ವಿರುದ್ಧ ಪ್ರತಿಭಟನೆಯಲ್ಲಿ ಬಯಲಾಗಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಲಾಭವಾಗುವುದು ಖಚಿತ ಎನ್ನುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ವಕ್ಫ್ ವಿವಾದ | ಯತ್ನಾಳ್ ನೇತೃತ್ವದ ಬಿಜೆಪಿಯ ಬಂಡಾಯ ತಂಡದಿಂದ ಬೀದರ್ ಜಿಲ್ಲೆಗೆ ಭೇಟಿ

ರಾಜ್ಯಾದ್ಯಂತ ವಕ್ಫ್ ವಿರುದ್ಧ ರೈತರು, ವಿಪಕ್ಷಗಳಿಂದ ವ್ಯಾಪಕ ಪ್ರತಿರೋಧ ವ್ಯಕ್ತವಾದ ಹಿನ್ನಲೆ ವಕ್ಫ್ ಮಂಡಳಿಯಿಂದ ಯಾವುದೇ ರೈತರಿಗೆ ನೋಟೀಸ್ ನೀಡದಂತೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಆದರೆ, ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿದ್ದನ್ನು ತೆಗೆದು ಹಾಕುವಂತೆ ಯತ್ನಾಳ ನೇತ್ರತ್ವದ ತಂಡ ಇಂದು ಬೀದರ್‌ ಜಿಲ್ಲೆಯಿಂದ ಮತ್ತೆ ಹೋರಾಟ ಆರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...