BIG BREAKING | ಸಂಪುಟ ಪುನರ್‌ರಚನೆಗೆ ರಾಹುಲ್‌ ಗಾಂಧಿ ಸಮ್ಮತಿ; ನಾಯಕತ್ವ ಬದಲಾವಣೆ ವದಂತಿಗೆ ತೆರೆ!

Date:

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಶೀಘ್ರವೇ ಸಚಿವ ಸಂಪುಟ ಮರುರಚನೆಯಾಗಲಿದೆ ಎಂದು ದೆಹಲಿಯ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪೂರ್ವಯೋಜನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ದೆಹಲಿಗೆ ತೆರಳಿದ್ದು, ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಭೇಟಿಯ ವೇಳೆ, ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಕುರಿತು ಚರ್ಚೆ ನಡೆದಿದೆ. ಸಂಪುಟ ಪುನರ್‌ರಚನೆಗೆ ರಾಹುಲ್‌ ಗಾಂಧಿ ಸಮ್ಮತಿ ನೀಡಿದ್ದಾರೆ. ಆದಾಗ್ಯೂ, ಸಂಪುಟಕ್ಕೆ ಸೇರ್ಪಡೆ ಮತ್ತು ಕೈಬಿಡುವ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅವರೊಂದಿಗೆ ಚರ್ಚಿಸಲು ಎರಡನೇ ಸುತ್ತಿನ ಸಭೆ ನಿಗದಿಯಾಗಿದೆ. ಅಂದು, ಮುಂದಿನ ಸಂಪುಟದಲ್ಲಿ ಯಾರು ಇರಲಿದ್ದಾರೆ, ಯಾರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ನಿರ್ಧಾರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ, ಸೋಮವಾರ (ನ.17) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಿದ್ದರಾಮಯ್ಯ ಅವರ ಸಭೆ ನಿಗದಿಯಾಗಿದೆ. ಇಂದು ರಾಜ್ಯಕ್ಕೆ ಮರಳಲಿರುವ ಸಿದ್ದರಾಮಯ್ಯ ಅವರು ಸೋಮವಾರ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಅಂದು, ಮೋದಿ ಜೊತೆಗಿನ ಸಭೆಯ ಬಳಿಕ, ಕಾಂಗ್ರೆಸ್‌ ಹೈಕಮಾಂಡ್‌ಅನ್ನೂ ಸಿದ್ದರಾಮಯ್ಯ ಅವರು ಭೇಟಿ ಮಾಡಲಿದ್ದು, ಅಂದೇ ಸಚಿವ ಸಂಪುಟದ ಭವಿಷ್ಯ ನಿರ್ಧರವಾಗುವ ಸಾಧ್ಯತೆ ಇದೆ.

ರಾಹುಲ್‌ ಗಾಂಧಿ ಅವರ ಭೇಟಿ ಮತ್ತು ಸಚಿವ ಸಂಪುಟ ಪುನರ್‌ರಚನೆಗೆ ಸಿಕ್ಕ ಸಮ್ಮತಿಯು, ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗೆ ತೆರೆ ಎಳೆದಿದೆ. ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆಯಾಗಲೀ, ನವೆಂಬರ್ ಕ್ರಾಂತಿಯಾಗಲೀ ನಡೆಯುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...