ಬಿಗ್ ಬ್ರೇಕಿಂಗ್ | ರಾಜ್ಯಸಭೆಗೆ ವಿನೇಶ್ ಫೋಗಟ್; ನಾಮನಿರ್ದೇಶನಕ್ಕೆ ಕಾಂಗ್ರೆಸ್‌ ಚಿಂತನೆ!

Date:

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್‌ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್‌ ಯೋಜಿಸುತ್ತಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್‌ ಮುಖಂಡ ಅಂಕಿತ್ ಮಯಾಂಕ್, “ವಿನೇಶ್ ಫೋಗಟ್ ಅವರನ್ನು ಹರಿಯಾಣದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಪರಿಗಣಿಸುತ್ತಿದೆ” ಎಂದು ಹೇಳಿದ್ದಾರೆ.

“ಪ್ರಸ್ತುತ ರಾಜ್ಯಸಭೆಯಲ್ಲಿ ದೀಪೇಂದರ್ ಸಿಂಗ್ ಹೂಡಾ ಅವರ ಅಧಿಕಾರವಧಿ ಮುಗಿದಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಫೋಗಟ್‌ ಅವರನ್ನು ನಾಮರ್ನಿದೇಶನ ಮಾಡಲು ಕಾಂಗ್ರೆಸ್‌ ಚಿಂತಿಸುತ್ತಿದೆ” ಎಂದು ಮಯಾಂಕ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ನ ಅದ್ಭುತ ಕ್ರಮ, ನಮ್ಮ ರಾಷ್ಟ್ರೀಯ ನಾಯಕಿ ವಿನೇಶ್ ಫೋಗಟ್ ಎಲ್ಲ ರೀತಿಯ ಗೌರವಕ್ಕೆ ಅರ್ಹರು” ಎಂದು ಪೋಸ್ಟ್‌ ಮಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಫೋಗಟ್, ಪ್ರಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಕುಸ್ತಿಪಟು ಎಂದೇ ಖ್ಯಾತಿ ಪಡೆದಿದ್ದ ಜಪಾನ್‌ನ ಯುಯಿ ಸುಸಾಕಿ ಅವರನ್ನು ಸೋಲಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದರು. ಕ್ವಾರ್ಟರ್‌ಫೈನಲ್, ಸೆಮಿಫೈನಲ್‌ಗಳನ್ನು ಗೆದ್ದು, ಫೈನಲ್ ತಲುಪಿಸಿದ್ದರು. ಆದರೆ, ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರಿಶೀಲನೆಯಲ್ಲಿ ಅವರು 50 ಕಿ.ಜಿ.ಗಿಂತ 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದಾರೆ ಎಂದು ಅವರನ್ನು ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗಿದೆ.

ಫೋಗಟ್‌ ಅವರು ಸ್ಪರ್ಧೆಯಿಂದ ಹೊರಗುಳಿದಿದ್ದರೂ, ಅವರಿಗೆ ಭಾರತೀಯರು ಪ್ರೀತಿಯ ಮಳೆಯನ್ನೇ ಸುರಿಸುತ್ತಿದ್ದಾರೆ. ನೀವು ಸ್ಪರ್ಧೆಯಿಂದ ಹೊರಗುಳಿದಿರಬಹುದು, ನಮ್ಮ ಹೃದಯದಿಂದಲ್ಲ ಎಂದು ಸಂತೈಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...