ಬ್ರೇಕಿಂಗ್ ನ್ಯೂಸ್ | ಜೆಡಿಎಸ್‌ಗೆ ಬಿಗ್ ಶಾಕ್ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

Date:

ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿ ಗೆದ್ದಿದ್ದರು. ದೇವೇಗೌಡರ ಕುಟುಂಬದ ಪ್ರಭಾವಿ ಯುವ ನಾಯಕನಾಗಿಯೂ ಬೆಳೆಯುತ್ತಿರುವ ಪ್ರಜ್ವಲ್ ರೇವಣ್ಣ ಈಗ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಆರು ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ, ಹಾಲಿ ಜೆಡಿಎಸ್‌ ಶಾಸಕರಾಗಿರುವ ಎ ಮಂಜು ಹಾಗೂ ಜಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್‌ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದರಿಂದ ತನ್ನನ್ನು ವಿಜೇತ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಎ ಮಂಜು ಅವರ ಕೋರಿಕೆಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.

ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು, ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.

ವಿಪರ್ಯಾಸದ ಸಂಗತಿ!

ವಿಪರ್ಯಾಸದ ಸಂಗತಿ ಏನೆಂದರೆ, ಪ್ರಜ್ವಲ್ ರೇವಣ್ಣ ವಿರುದ್ಧ ಅರ್ಜಿ ಹಾಕಿರುವ ಎ. ಮಂಜು ಅವರು ಸದ್ಯ ಅರಕಲಗೂಡು ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ. ಮೊದಲು ಕಾಂಗ್ರೆಸ್‌ನಲ್ಲಿದ್ದ ಎ. ಮಂಜು ಆ ಬಳಿಕ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ಮಂಜು ಅವರ ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.
ಲೋಕಸಭಾ ಚುನಾವಣೆಗೆ 6 ತಿಂಗಳು ಇರುವಾಗ ಪ್ರಜ್ವಲ್ ರೇವಣ್ಣ ಅನರ್ಹಗೊಂಡಿದ್ದಾರೆ.

ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...