ರಾಮಮಂದಿರ ಇರುವ ಫೈಜಾಬಾದ್‌ನಲ್ಲಿ ಬಿಜೆಪಿಗೆ ಹಿನ್ನಡೆ: ಅಯೋಧ್ಯೆಯಲ್ಲಿ ಕೇಸರಿ ಪಕ್ಷಕ್ಕೆ ಆಘಾತ

Date:

ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ರಾಮಮಂದಿರ ಕೇಸರಿ ಪಕ್ಷಕ್ಕೆ ಯಾವುದೇ ಲಾಭ ನೀಡಿದಂತಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಕ್ಷವು ಜನವರಿ 22ರಂದು ದೇವಾಲಯದ ಉದ್ಘಾಟನೆ ಮಾಡಿದೆ. ಬಿಜೆಪಿಯು ರಾಮಮಂದಿರ ಅಲೆಯಿಂದಲೇ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫೈಜಾಬಾದ್‌ನಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅವಧೇಶ್ ಪ್ರಸಾದ್‌ ಮುನ್ನಡೆಯಲ್ಲಿದ್ದಾರೆ.

ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಲಲ್ಲು ಸಿಂಗ್ ಎಸ್‌ಪಿಯ ಅವಧೇಶ್ ಪ್ರಸಾದ್ ವಿರುದ್ಧ 2,244 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ;’ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ

ಫೈಜಾಬಾದ್ ಬಿಜೆಪಿಗೆ ಸುರಕ್ಷಿತ ಸ್ಥಾನವೆಂದು ಪರಿಗಣಿಸಲಾಗಿತ್ತು. ಆದರೆ ಇಲ್ಲಿ ಬಿಜೆಪಿಗೆ ಹಿನ್ನೆಡೆ ಆಶ್ಚರ್ಯ ಹುಟ್ಟಿಸಿದೆ. ಎಸ್‌ಪಿ ಈ ಕ್ಷೇತ್ರ ಮಾತ್ರವಲ್ಲದೆ ಉತ್ತರ ಪ್ರದೇಶದ 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.

ಹೆಚ್ಚಿನ ಸಮೀಕ್ಷೆ ತಜ್ಞರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯದ ಭವಿಷ್ಯ ನುಡಿದಿದ್ದರು. ಆದರೆ ಬಿಜೆಪಿ ಬಹುತೇಕ ಹಿನ್ನೆಡೆ ಸಾಧಿಸುತ್ತಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಚ್ಚರಿ ಮೂಡಿಸಿದೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ ಎಂಬ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡುಗಳಲ್ಲಿ ಇಂಡಿಯಾ ಒಕ್ಕೂಟ ಮುಂಚೂಣಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...