EXIT POLLನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

Date:

“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ EXIT POLLನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿರುವ ಎಐಸಿಸಿಯ ಮುಖ್ಯ ಕಚೇರಿಯಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 4 ರಂದು ಷೇರು ಮಾರುಕಟ್ಟೆ ಏರಿಕೆಯಾಗಲಿದೆ ಮತ್ತು ನೀವೆಲ್ಲರೂ ಹೂಡಿಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಜೊತೆಗೆ ಹಣಕಾಸು ಸಚಿವರೂ ಇದೇ ರೀತಿ ಹೇಳಿದ್ದರು. ಜೂನ್ 4ರ ಮೊದಲು ಷೇರುಗಳನ್ನು ಖರೀದಿಸಿ ಎಂದು ಖುದ್ದು ಪ್ರಧಾನಿ ಮೋದಿ ಕೂಡ ಹೇಳಿದ್ದರು. ಅಲ್ಲದೇ, ಜೂನ್ 4ರಂದು ಮಾರುಕಟ್ಟೆಯ ಹಿಂದಿನ ದಾಖಲೆಗಳನ್ನು ಮುರಿಯಲಿದೆ ಎಂದಿದ್ದರು. ಬಿಜೆಪಿಗೆ ಬಹುಮತ ಬರುವುದಿಲ್ಲ ಎಂದು ಪಕ್ಷದ ಆಂತರಿಕ ಸರ್ವೇಯಿಂದ ಖಚಿತ ಮಾಹಿತಿ ಇದ್ದರೂ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡಿ, ದೇಶದ ಜನರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ. EXIT POLLನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ದೇಶದ ಬೃಹತ್ ಹಗರಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ 5 ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ನಿರ್ದಿಷ್ಟ ಸಲಹೆಯನ್ನು ಏಕೆ ನೀಡಿದರು? ಜನರಿಗೆ ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ” ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಎಂದು ಸಲಹೆ ನೀಡುವುದಕ್ಕೆ ಎರಡೂ ಸಂದರ್ಶನಗಳನ್ನು ಒಂದೇ ಮಾಧ್ಯಮಕ್ಕೆ ನೀಡಲಾಗಿದೆ. ಈ ಮಾಧ್ಯಮ ಸಂಸ್ಥೆಯ ಮಾತೃಸಂಸ್ಥೆಯು ಷೇರು ಮಾರುಕಟ್ಟೆಯನ್ನು ತಿರುಚಿದ ಆರೋಪಕ್ಕಾಗಿ ಸೆಬಿಯಿಂದ ತನಿಖೆ ಎದುರಿಸುತ್ತಿದೆ. ಇದೇ ಸಂಸ್ಥೆಗೆ ಯಾಕೆ ಸಂದರ್ಶನ ನೀಡಿದ್ದಾರೆ? ಬಿಜೆಪಿ ಮತ್ತು ನಕಲಿ ಎಕ್ಸಿಟ್ ಪೋಲ್‌ಗಳನ್ನು ಪ್ರಕಟಿಸಿದ ಸಂಸ್ಥೆಗಳಿಗೂ ಹಾಗೂ ಎಕ್ಸಿಟ್‌ ಪೋಲ್‌ಗೂ ಮುಂಚೆ ಷೇರು ಖರೀದಿಸಿದ ಸಂಶಯಾಸ್ಪದ ವಿದೇಶಿ ಹೂಡಿಕೆದಾರರಿಗೂ ನಡುವಿನ ಸಂಬಂಧವೇನು? ಇದಕ್ಕೆಲ್ಲ ಉತ್ತರ ಸಿಗಬೇಕಿದೆ. ಇದು ಅತಿದೊಡ್ಡ ಷೇರು ಮಾರುಕಟ್ಟೆಯ ಹಗರಣ. ಈ ಕುರಿತು ನಾವು ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ. 30 ಲಕ್ಷ ಕೋಟಿ ನಷ್ಟವಾಗಿರುವುದರಿಂದ 5 ಕೋಟಿ ಕುಟುಂಬಗಳಿಗೆ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ದೇಶದ ಜನರಿಗಾದ ನಷ್ಟಕ್ಕೆ ಯಾರು ಹೊಣೆ ಎಂಬುದಕ್ಕೆ ಉತ್ತರ ಸಿಗಬೇಕಿದೆ” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...