ಬಿಹಾರ ಚುನಾವಣೆ | ‘ಗೋಬಿ ಕೃಷಿ’ ಚಿತ್ರ ಪೋಸ್ಟ್ ಮಾಡಿದ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಪ್ರಚೋದನೆ!

Date:

ಅಸ್ಸಾಂ ಬಿಜೆಪಿ ಸಚಿವ ಅಶೋಕ್ ಸಿಂಘಾಲ್ ಬಿಹಾರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹೂಕೋಸುಗಳ ಚಿತ್ರವನ್ನು ಹಂಚಿಕೊಂಡಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ‘ಗೋಬಿ ಕೃಷಿ’ ಚಿತ್ರ ಪೋಸ್ಟ್ ಮಾಡಿದ ಬಿಜೆಪಿ ಸಚಿವ ‘ಬಿಹಾರ ಗೋಬಿ ಕೃಷಿಯನ್ನು ಅನುಮೋದಿಸುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಈ ಪೋಸ್ಟ್ 1989ರ ಭಾಗಲ್ಪುರ ಕೋಮು ಗಲಭೆ, ಲೋಗೇನ್ ಹತ್ಯಾಕಾಂಡ ಎಂದು ಕರೆಯಲ್ಪಡುವ ಕುಖ್ಯಾತ ‘ಹೂಕೋಸು ಸಮಾಧಿ ಪ್ರಕರಣ’ವನ್ನು ಬಿಂಬಿಸುತ್ತದೆ ಎಂದು ಅನೇಕ ಎಕ್ಸ್‌ ಬಳಕೆದಾರರು ಹೇಳಿದ್ದಿ. ಸದ್ಯ ಸಚಿವರ ಟ್ವೀಟ್ ತೀವ್ರ ಟೀಕೆಗೆ, ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ‘ಹೂಕೋಸು ಸಮಾಧಿ ಪ್ರಕರಣ’?

1989ರ ಅಕ್ಟೋಬರ್ 24ರಂದು ಬಿಹಾರದ ಭಾಗಲ್ಪುರ ನಗರ ಮತ್ತು ಸುತ್ತಮುತ್ತಲಿನ 250 ಹಳ್ಳಿಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಸಾವಿರಾರು ಮಂದಿಯ ಹತ್ಯೆ ನಡೆದಿದೆ. ಸುಮಾರು 900 ಮುಸ್ಲಿಮರು ಸೇರಿದಂತೆ 1,000 ಕ್ಕೂ ಹೆಚ್ಚು ಜನರ ಹತ್ಯಾಕಾಂಡ ನಡೆದಿದ್ದು ಸುಮಾರು 50,000 ಜನರು ಸ್ಥಳಾಂತರಗೊಂಡಿದ್ದಾರೆ.

ಲೋಗೇನ್ ಗ್ರಾಮದಲ್ಲಿ, ಎಎಸ್ಐ ರಾಮಚಂದರ್ ಸಿಂಗ್ ನೇತೃತ್ವದ 4,000 ಜನರ ಗುಂಪೊಂದು 116 ಮುಸ್ಲಿಮರನ್ನು ಕೊಂದಿದ್ದು ಶವಗಳನ್ನು ಹೂತು ಅದರ ಮೇಲೆ ಹೂಕೋಸು ಮತ್ತು ಎಲೆಕೋಸು ಸಸಿಗಳನ್ನು ನೆಟ್ಟು ಮರೆಮಾಡಿತ್ತು. 2007ರಲ್ಲಿ, ಮಾಜಿ ಪೊಲೀಸ್ ಅಧಿಕಾರಿ ಸೇರಿದಂತೆ ಹದಿನಾಲ್ಕು ಜನರನ್ನು ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕೋರ್ಟ್ ಘೋಷಿಸಿದೆ. ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಘಟನೆ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಹೂಕೋಸುಗಳನ್ನು ಈ ದುರಂತ ಹತ್ಯಾಕಾಂಡದ ಪ್ರತೀಕವಾಗಿ ಬಳಸಲಾಗುತ್ತಿದೆ. ಇದೀಗ ಬಿಹಾರ ಚುನಾವಣೆ ಬೆನ್ನಲ್ಲೇ ಬಿಜೆಪಿ ಸಚಿವ ಹೂಕೋಸಿನ ಚಿತ್ರ ಪೋಸ್ಟ್ ಮಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗುತ್ತಿದೆ.

ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಗೋಬಿ ಕೃಷಿ ಎಂದರೆ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ವೈಭವೀಕರಿಸುವುದಾಗಿದೆ. ಸಾಕ್ಷ್ಯಗಳನ್ನು ಮರೆಮಾಡಲು ಸಮಾಧಿಗಳ ಮೇಲೆ ಹೂಕೋಸುಗಳನ್ನು ನಡೆಲಾಗಿತ್ತು. ಈ ಪೋಸ್ಟ್ ಮಾಡಿದವರು ಇದು ಮೋದಿಯ ಅಸ್ಸಾಂನ ಬಿಜೆಪಿ ಸಚಿವರು. ಇದು ಯಾವುದೋ ಒಂದು ಸಣ್ಣ ವಿಚಾರವಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...