ಪ್ರಮಾಣವಚನ ಸ್ವೀಕಾರದಲ್ಲೇ ‘ವಿಶ್ವ ದಾಖಲೆ ಪುಸ್ತಕ’ ಸೇರಿದ ಬಿಹಾರ ಸಿಎಂ ನಿತೀಶ್ ಕುಮಾರ್

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಶ್ವ ದಾಖಲೆ ಪುಸ್ತಕದಲ್ಲಿ (world book of record – WBR) ತಮ್ಮ ಹೆಸರು ಸೇರಿಸಿದ್ದು, ಜಾಗತಿಕ ಮನ್ನಣೆ ಪಡೆದಿದ್ದಾರೆ. ಸ್ವತಂತ್ರ ಭಾರತದಲ್ಲಿ ಮುಖ್ಯಮಂತ್ರಿಯಾಗಿ 10ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನವೆಂಬರ್ 20ರಂದು ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರನ್ನು ಡಬ್ಲ್ಯೂಬಿಆರ್‌ ಅಭಿನಂದಿಸಿದೆ. 1947 ರಿಂದ2025 ರವರೆಗೆ, ಹತ್ತು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ನಿತೀಶ್ ಎಂದು ಡಬ್ಲ್ಯೂಬಿಆರ್‌ ತನ್ನ ಅಭಿನಂದನಾ ಪತ್ರದಲ್ಲಿ ತಿಳಿಸಿದೆ.

“ಈ ಮೈಲಿಗಲ್ಲು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮಾನದಂಡವನ್ನು ನಿರ್ಮಿಸಿದೆ. ನಾಯಕತ್ವದ ಅಪರೂಪದ ನಿರಂತರತೆಯನ್ನು ಪ್ರತಿಬಿಂಬಿಸುತ್ತದೆ. ಅವರ ಬದ್ಧತೆ, ದೂರದೃಷ್ಟಿಯ ನಾಯಕತ್ವ ಹಾಗೂ ಬಿಹಾರದ ಜನರ ಮೇಲಿನ ಅಚಲ ನಂಬಿಕೆಯನ್ನು ಸೂಚಿಸುತ್ತದೆ. ಹತ್ತು ಬಾರಿ ರಾಜ್ಯವನ್ನು ಮುನ್ನಡೆಸುವುದು ಕೇವಲ ವೈಯಕ್ತಿಕ ಸಾಧನೆಯಲ್ಲ. ಇಡೀ ದೇಶಕ್ಕೆ ಗೌರವದ ಕ್ಷಣವಾಗಿದೆ” ಎಂದು ಅಭಿನಂದನಾ ಪತ್ರದಲ್ಲಿ ಡಬ್ಲ್ಯೂಬಿಆರ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ದ್ವೇಷ ಭಾಷಣ ನಿಷೇಧ ವಿಧೇಯಕ | ಕರ್ನಾಟಕದ ಸೌಹಾರ್ದ ಪರಂಪರೆಗೆ ರಕ್ಷಾ ಕವಚವಾಗಬಲ್ಲದೇ?

“ಆಡಳಿತ, ಅಭಿವೃದ್ಧಿ, ಸಾಮಾಜಿಕ ಕಲ್ಯಾಣ ಹಾಗೂ ಆಡಳಿತಾತ್ಮಕ ಸ್ಥಿರತೆಯನ್ನು ಕಾಪಾಡಿಕೊಳ್ಳುವಲ್ಲಿ ನಿತೀಶ್ ಅವರ ನಿರಂತರ ಪ್ರಯತ್ನಗಳು ದೇಶಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿವೆ. ಅವರ ನಾಯಕತ್ವವು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಪ್ರೇರಣೆ ನೀಡುತ್ತಲೇ ಇರುತ್ತದೆ. ಅಪರೂಪದ ಸಾಧನೆಯ ಸಂಕೇತವಾಗಿ, ನಿತೀಶ್ ಅವರ ಹೆಸರನ್ನು ಡಬ್ಲ್ಯೂಬಿಆರ್‌ ಪಟ್ಟಿಯಲ್ಲಿ ಸೇರಿಸಲಾಗಿದೆ” ಎಂದು ಹೇಳಿದೆ.

ನಿತೀಶ್ ಅವರ ಹೆಸರನ್ನು ಡಬ್ಲ್ಯೂಬಿಆರ್‌ ಸೇರಿಸಿರುವ ಕುರಿತು ಪ್ರತಿಕ್ರಿಯಿಸಿರುವ ಜೆಡಿಯು ಎಂಎಲ್‌ಸಿ, ವಕ್ತಾರ ನೀರಜ್ ಕುಮಾರ್, “ಇದು ಬಿಹಾರಕ್ಕೆ ಮಾತ್ರವಲ್ಲದೆ ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ. ಬಿಹಾರದ ಅಭಿವೃದ್ಧಿಗಾಗಿ ನಿತೀಶ್ ಅವರ ಅವಿರತ ಪ್ರಯತ್ನಗಳು ಮತ್ತು ದೃಷ್ಟಿಕೋನಕ್ಕೆ ದೊರೆತ ಮನ್ನಣೆಯಾಗಿದೆ. ಪಕ್ಷದ ಸಾಧನೆಗಳಿಗೆ ಬೆನ್ನೆಲುಬಾಗಿರುವ ಜೆಡಿಯು ಕಾರ್ಯಕರ್ತರಿಗೆ ಸ್ಫೂರ್ತಿ ನೀಡುತ್ತದೆ” ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ಈವರೆಗೆ ಸುಮಾರು 20 ವರ್ಷಗಳ ಕಾಲ ಬಿಹಾರದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಆದಾಗ್ಯೂ, ದೇಶದಲ್ಲಿ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದವರ ಪಟ್ಟಿಯಲ್ಲಿ ಪವನ್ ಕುಮಾರ್ ಚಾಮ್ಲಿಂಗ್ (ಸಿಕ್ಕಿಂ) ಅಗ್ರಸ್ಥಾನದಲ್ಲಿದ್ದಾರೆ. ಅವರು ಸಿಕ್ಕಿಂ ಮುಖ್ಯಮಂತ್ರಿಯಾಗಿ 24 ವರ್ಷ, 5 ತಿಂಗಳು, 14 ದಿನಗಳು ಆಡಳಿತ ನಡೆಸಿದ್ದಾರೆ. 2ನೇ ಸ್ಥಾನದಲ್ಲಿ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದ್ದಾರೆ. ಅವರು 24 ವರ್ಷಗಳಿಗೂ ಹೆಚ್ಚು ಕಾಲ ಆಡಳಿತ ನಡೆಸಿದ್ದಾರೆ. ಜ್ಯೋತಿ ಬಸು (ಪಶ್ಚಿಮ ಬಂಗಾಳ) 23 ವರ್ಷಗಳು, ಗೆಗಾಂಗ್ ಅಪಾಂಗ್ (ಅರುಣಾಚಲ ಪ್ರದೇಶ) ಮತ್ತು ಲಾಲ್ ತನ್ಹಾವ್ಲಾ (ಮಿಜೋರಾಂ) ಸುಮಾರು 22 ವರ್ಷಗಳು, ವೀರಭದ್ರ ಸಿಂಗ್ (ಹಿಮಾಚಲ ಪ್ರದೇಶ) 21 ವರ್ಷಗಳು ಹಾಗೂ ಎಂ ಕರುಣಾನಿಧಿ (ತಮಿಳುನಾಡು) 18 ವರ್ಷ, 10 ತಿಂಗಳುಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...