ಬಿಹಾರ | ಯುವತಿಯ ‘ವೋಟರ್​ ಐಡಿ’ಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ; ಆಯೋಗದ ಯಡವಟ್ಟು

Date:

ಯುವತಿಯೊಬ್ಬರ ಮತದಾರ ಗುರುತಿನ ಚೀಟಿಯಲ್ಲಿ (ವೋಟರ್ ಐಡಿ) ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಚುನಾವಣಾ ಆಯೋಗವು ಮುದ್ರಿಸಿರುವ ಘಟನೆ ಬೆಳಕಿಗೆ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕ್ರಮದ ವಿರುದ್ಧ ರಾಜ್ಯದ ಜನರ ಆಕ್ರೋಶಗೊಂಡಿರುವ ಸಮಯದಲ್ಲೇ ಆಯೋಗದ ಯಡವಟ್ಟು ಬೆಳಕಿಗೆ ಬಂದಿದೆ. ಮತದಾರರು ಆಯೋಗವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಹಾರದ ಮಾಧೇಪುರದಲ್ಲಿ 29 ವರ್ಷದ ಯುವತಿಯೊಬ್ಬರ ಗುರುತಿನ ಚೀಟಿಯಲ್ಲಿ ಯುವತಿಯ ಫೋಟೋ ಬದಲಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಮುದ್ರಿಸಲಾಗಿದೆ. ಇದು ವ್ಯವಸ್ಥೆಯ ನಿರ್ಲಕ್ಷ್ಯ ಮತ್ತು ಚುನಾವಣಾ ಆಯೋಗದ ವೈಫಲ್ಯ ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದಾರೆ.

ಮಾಧೇಪುರದ ಅಭಿಲಾಷ ಕುಮಾರಿ ಎಂಬವರಿಗೆ ಮತದಾರ ಗುರುತಿನ ಚೀಟಿಯು ಅಂಚೆ ಮೂಲಕ ಬಂದಿತ್ತು. ಅದನ್ನು ತೆಗೆದು ನೋಡಿದಾಗ, ಅದರಲ್ಲಿ, ತಮ್ಮ ಚಿತ್ರದ ಬದಲಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರ ಕಂಡುಬಂದಿದೆ. ಅದನ್ನು ನೋಡಿ, ಯುವತಿ ವಿಚಲಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

ಬಳಿಕ, ಅಭಿಲಾಷ ಅವರು ಚುನಾವಣಾ ಆಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಚುನಾವಣಾ ಅಧಿಕಾರಿ ಜೀತೇಂದ್ರ ಕುಮಾರ್, “ಬಿಹಾರದ ಮತದಾರರ ಚೀಟಿಗಳು ಕರ್ನಾಟಕದಲ್ಲಿ ತಯಾರಾಗಿವೆ. ಗುರುತಿನ ಚೀಟಿಗಳ ತಯಾರಿ ವೇಳೆ ತಪ್ಪುಗಳಾಗಿದ್ದರೆ, ಅವುಗಳನ್ನು ಸರಿಪಡಿಸುತ್ತೇವೆ. ಮತದಾರರ ಚೀಟಿಯಲ್ಲಿ ಯಾವುದೇ ತಪ್ಪುಗಳ ಕಂಡಬಂದರೂ, ತಿದ್ದುಪಡಿಗಾಗಿ ಆಯೋಗಕ್ಕೆ ಆನ್‌ಲೈನ್ ಮತ್ತು ಆಫ್‌ನಲ್ಲಿ ಅರ್ಜಿ ಸಲ್ಲಿಸಬಹುದು. ತಪ್ಪುಗಳನ್ನು ತಿದ್ದಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...