ಬಿಹಾರ ಸಿಎಂ ನಿತೀಶ್‌ ಪುತ್ರ ರಾಜಕೀಯಕ್ಕೆ ಎಂಟ್ರಿ

Date:

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ ಅಂತಿಮಗೊಂಡಿದೆ. ಈ ಬಗ್ಗೆ ಜೆಡಿಯು ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ. ಅಂದೇ, ಪಕ್ಷದಲ್ಲಿ ಅವರು ನಿಭಾಯಿಸುವ ಜವಾಬ್ದಾರಿಯ ಕುರಿತೂ ಮಾಹಿತಿ ನೀಡಲಾಗುತ್ತದೆ ಎಂದು ಬಿಹಾರ ಸಚಿವ ಶ್ರವಣ್ ಕುಮಾರ್ ತಿಳಿಸಿದ್ದಾರೆ.

ಜೆಡಿಯು ಪಕ್ಷದ ಹಿರಿಯ ನಾಯಕರಾಗಿರುವ ಶ್ರವಣ್ ಕುಮಾರ್, “ನಿಶಾಂತ್ ಅವರಿಗೆ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಲಾಗುವುದು” ಎಂದು ಹೇಳಿದ್ದಾರೆ.

“ನಿಶಾಂತ್ ಕುಮಾರ್ ಅವರು ಸಕ್ರಿಯ ರಾಜಕೀಯಕ್ಕೆ ಸೇರುವುದು ಈಗ ಅಂತಿಮಗೊಂಡಿದೆ. ಪಕ್ಷವು ಒಂದು ಅಥವಾ ಎರಡು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದೆ. ನಿಶಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಪಕ್ಷದ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಹೋಳಿ ಹಬ್ಬದ ಮುನ್ನವೇ ಈ ನಿರ್ಧಾರ ಹೊರಬಂದಿರುವುದು ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಂಭ್ರಮ ಮೂಡಿಸಿದೆ” ಎಂದು ಅವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷದಲ್ಲಿ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲಾಗುವುದು. ಅವರು ಯಾವ ನಿರ್ದಿಷ್ಟ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂಬುದು ಒಂದೆರಡು ದಿನಗಳಲ್ಲಿ ನಿರ್ಧಾರವಾಗಲಿದೆ” ಎಂದು ಸಚಿವರು ಸೇರಿಸಿದ್ದಾರೆ.

ನಿಶಾಂತ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರವಣ್ ಕುಮಾರ್, “ಏನು ಬೇಕಾದರೂ ಆಗಬಹುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...