ಬಿಹಾರ ಉಪಮುಖ್ಯಮಂತ್ರಿ ವಿಜಯ್ ಎರಡು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ: ತೇಜಸ್ವಿ ಯಾದವ್

Date:

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ. ಸಿನ್ಹಾ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಪ್ರಶ್ನಿಸಿದ್ದಾರೆ.

ಪಟನಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಾದವ್, “ವಿಜಯ್ ಕುಮಾರ್ ಸಿನ್ಹಾ ಎರಡು ವಿಭಿನ್ನ ಜಿಲ್ಲೆಗಳ ಎರಡು ವಿಭಿನ್ನ ವಿಧಾನಸಭಾ ಕ್ಷೇತ್ರಗಳ ಮತದಾರರಾಗಿದ್ದಾರೆ. ಪಟನಾ ಜಿಲ್ಲೆಯಲ್ಲಿ ಲಖಿಸರಾಯ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಅವರ ಹೆಸರು ಇದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ, ತೇಜಸ್ವಿ ಯಾದವ್‌ ಬಿಹಾರ ಮುಖ್ಯಮಂತ್ರಿ: ಕನ್ಹಯ್ಯಾ ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ಎರಡು ವಿಭಿನ್ನ ಚುನಾವಣಾ ಫೋಟೋ ಗುರುತಿನ ಚೀಟಿ (EPIC) ಕಾರ್ಡ್‌ಗಳನ್ನು ಹೊಂದಿದ್ದಾರೆ. ಆಶ್ಚರ್ಯಕರವಾಗಿ, ಬಿಹಾರದಲ್ಲಿ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ (SIR) ಮಾಡಿದ ನಂತರ ಇದು ಸಂಭವಿಸಿದೆ. ಇದೀಗ ಯಾರನ್ನು ಹೊಣೆಗಾರರನ್ನಾಗಿಸುವುದು? ಸ್ವತಃ ಸಿನ್ಹಾ ಅವರನ್ನೇ ಅಥವಾ ಚುನಾವಣಾ ಆಯೋಗವನ್ನೇ? ಸಿನ್ಹಾ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ? ಅವರು ಯಾವಾಗ ಹುದ್ದೆಗೆ ರಾಜೀನಾಮೆ ನೀಡುತ್ತಾರೆ” ಎಂದು ತೇಜಸ್ವಿ ಯಾದವ್ ಕೇಳಿದ್ದಾರೆ.

ಇನ್ನು ಯಾದವ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿನ್ಹಾ, “ಈ ಹಿಂದೆ, ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಕುಟುಂಬ ಸದಸ್ಯರ ಹೆಸರುಗಳನ್ನು ಪಟ್ಟಿ ಮಾಡಲಾಗಿತ್ತು. 2024ರ ಏಪ್ರಿಲ್‌ನಲ್ಲಿ ನಾನು ಲಖಿಸರೈನಿಂದ ನನ್ನ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸಿದ್ದೆ. ನನ್ನ ಮತ್ತು ನನ್ನ ಕುಟುಂಬ ಸದಸ್ಯರ ಹೆಸರುಗಳನ್ನು ಬಂಕಿಪುರದಿಂದ ತೆಗೆದುಹಾಕಲು ನಾನು ಒಂದು ಫಾರ್ಮ್ ಅನ್ನು ಸಹ ಭರ್ತಿ ಮಾಡಿದ್ದೇನೆ. ನನ್ನ ಬಳಿ ಪುರಾವೆಗಳಿವೆ. ಕೆಲವು ಕಾರಣಗಳಿಂದ, ನನ್ನ ಹೆಸರನ್ನು ಬಂಕಿಪುರದಿಂದ ತೆಗೆದುಹಾಕಲಾಗಿಲ್ಲ ಮತ್ತು ಅದು ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ” ಎಂದಿದ್ದಾರೆ.

“ಬಂಕಿಪುರದಲ್ಲಿ ನನ್ನ ಹೆಸರನ್ನು ತೆಗೆದುಹಾಕಲು ನಾನು ಬೂತ್ ಮಟ್ಟದ ಅಧಿಕಾರಿಗೆ ಕರೆ ಮಾಡಿ ಲಿಖಿತ ಅರ್ಜಿಯನ್ನು ಸಲ್ಲಿಸಿದೆ, ರಶೀದಿಯನ್ನು ತೆಗೆದುಕೊಂಡೆ. ನನ್ನ ಬಳಿ ಎರಡೂ ದಾಖಲೆಗಳಿವೆ. ನಾನು ಒಂದು ಸ್ಥಳದಲ್ಲಿ ಮಾತ್ರ ಮತ ಚಲಾಯಿಸಿದ್ದೇನೆ” ಎಂದು ಹೇಳಿದ್ದಾರೆ.

“ಆದರೆ ಜಂಗಲ್-ರಾಜ್ ರಾಜಕುಮಾರ (ತೇಜಸ್ವಿ) ತಪ್ಪು ಸಂಗತಿಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು,” ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ, ಆಗಸ್ಟ್ 1ರಂದು ಬಿಡುಗಡೆಯಾದ ಹೊಸ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ತೇಜಸ್ವಿ ಆರೋಪಿಸಿದ್ದಾರೆ. ಹಾಗೆಯೇ ತಮ್ಮ EPIC ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದೂ ದೂರಿದ್ದಾರೆ. ಬೇರೆ ಮತದಾರರ ಗುರುತಿನ ಚೀಟಿ ನೀಡಿದ ಕಾರಣಕ್ಕೆ ಚುನಾವಣಾ ಆಯೋಗವನ್ನು ದೂಷಿಸಿದ್ದಾರೆ. ಅದಾದ ಬಳಿಕ  ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್ 16ರ ಸಂಜೆ ಐದು ಗಂಟೆಯೊಳಗೆ ಪರಿಶೀಲನೆಗಾಗಿ ತಮ್ಮ ಮೂಲ ಮತದಾರರ ಫೋಟೋ ಗುರುತಿನ ಚೀಟಿ (EPIC) ಯನ್ನು ಸಲ್ಲಿಸುವಂತೆ ಇಸಿಐ ತಿಳಿಸಿದೆ. ಈ ಎಲ್ಲ ಬೆಳವಣಿಗೆ ನಡುವೆ ಬಿಹಾರ ಉಪಮುಖ್ಯಮಂತ್ರಿಯೂ ಎರಡು ಗುರುತಿನ ಚೀಟಿ ಹೊಂದಿರುವ ಬಗ್ಗೆ ತೇಜಸ್ವಿ ಯಾದವ್ ಮಾತನಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...